ದ.ಕ, ಉಡುಪಿ ಜಿಲ್ಲೆಗೆ ಇಂದು ಕೃಷಿ ಸಚಿವರ ಭೇಟಿ

Upayuktha
0

 


ಮಂಗಳೂರು: ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ರವರು ಜೂನ್ 25 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರಿಗೆ ಆಗಮಿಸಲಿದ್ದಾರೆ.

ಮುಂಗಾರು ಪ್ರಾರಂಭವಾಗುವ ಹಿನ್ನೆಲೆ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಲಭ್ಯತೆ ಹಾಗೂ ಪೂರ್ವ ಸಿದ್ಧತೆ ಕುರಿತು, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಸಲಿದ್ದಾರೆ. ನಂತರ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ.

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top