ಇನ್ನು ಮುಂದೆ ಆಟೋ, ಟ್ಯಾಕ್ಸಿ ಚಾಲಕರಿಗೆ ಟಫ್ ರೂಲ್ಸ್...!

Upayuktha
0




ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಜಾರಿ ಮಾಡಿದ್ದ ಲಾಕ್ಡೌನ್ ನನ್ನು ಹಂತ ಹಂತವಾಗಿ ತೆರವುಗೊಳಿಸುವ ಪ್ರಕ್ರಿಯೆಯನ್ನು ಸರ್ಕಾರ ಕೈಗೊಂಡಿದೆ. ಆದ್ದರಿಂದ ವಾಹನಗಳ ಚಾಲನೆಗೂ ಸ್ವಲ್ಪ ರಿಲೀಫ್ ಸಿಕ್ಕಿದೆ ಎನ್ನಬಹುದು.


ಆದರೆ ಈಗ ಆಟೋ, ಟ್ಯಾಕ್ಸಿ ಚಾಲಕರಿಗೆ ಬೆಂಗಳೂರು ಮಹಾನಗರ ಪಾಲಿಕೆ ಕೆಲವು ನಿಯಮಗಳನ್ನು ವಿಧಿಸಿದೆ.

ಚಾಲಕರು ಲಸಿಕೆ ಹಾಕಿಕೊಂಡಿದ್ದರೆ ಮಾತ್ರ ವಾಹನ ಚಾಲನೆಗೆ ಅವಕಾಶ ಇರಲಿದೆ. ಹಾಗೆಯೇ ವಾಹನವನ್ನು ಕಡ್ಡಾಯವಾಗಿ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿಕೊಂಡಿರಬೇಕು. ಮತ್ತು ಪ್ರಯಾಣಿಕರು ಹಾಗೂ ಚಾಲಕರ ನಡುವೆ ಪರದೆ ಹಾಕಿಕೊಂಡಿರಬೇಕು. ಅಲ್ಲದೆ ವಾಹನದಲ್ಲಿ ಇಬ್ಬರು ಪ್ರಯಾಣಿಕರಿಗಿಂತ ಹೆಚ್ಚು ಜನ ಪ್ರಯಾಣಿಸುವಂತಿಲ್ಲ. ಮಾಸ್ಕನ್ನು ಎಲ್ಲರೂ ಕಡ್ಡಾಯವಾಗಿ ಧರಿಸಿರಬೇಕು.


ಸಂಪೂರ್ಣ ಹಂತದ ಅನ್ಲಾಕ್ ಆದ ನಂತರವೂ ಈ ನಿಯಮ ಜಾರಿಯಲ್ಲಿರಲಿದೆ ಎಂದು ಬಿಬಿಎಂಪಿ ತಿಳಿಸಿದೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top