ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು ಇವರ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ರಾತ್ರಿ ತನ್ನ ಗೆಳೆಯನ ಜೊತೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತವಾಗಿದ್ದು ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೆದುಳಿನ ಬಲಭಾಗಕ್ಕೆ ಪೆಟ್ಟಾಗಿದ್ದು ಅದರ ಶಸ್ತ್ರಕ್ರಿಯೆ ಮಾಡಲಾಗಿದೆ ಎನ್ನಲಾಗುತ್ತಿದೆ.
ಚಿಕಿತ್ಸೆ ನೀಡಿದ ನ್ಯೂರೋ ಸರ್ಜನ್ ಡಾ. ಅನಿಲ್ ಕುಮಾರ್ ಅವರ ಸ್ಥಿತಿ ಗಂಭೀರವಾಗಿದ್ದು ಮುಂದಿನ 48 ಗಂಟೆ ತುಂಬಾ ಮುಖ್ಯವಾಗಿದೆ. ಕಾಲಿನ ಶಸ್ತ್ರಚಿಕಿತ್ಸೆ ಕೂಡ ನಡೆಯಬೇಕಿದೆ ಎಂದಿದ್ದಾರೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ