ಕೋವಿಡ್‌ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ಧನ: ಸಿಎಂ ಯಡಿಯೂರಪ್ಪ ಘೋಷಣೆ

Upayuktha
0


ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ಪರಿಹಾರ ಧನವನ್ನು ಕುಟುಂಬದ ಒಬ್ಬರಿಗೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.


ಮಂಡ್ಯ ಹಾಲು ಒಕ್ಕೂಟದಲ್ಲಿ ಹಾಲಿಗೆ ನೀರು ಕಲಬೆರಕೆ ಮಾಡಿರುವ ಮಾಹಿತಿ ಬಂದಿದ್ದು, ಇದನ್ನು ಪ್ರಾಥಮಿಕ ತನಿಖೆ ಇಲಾಖೆಗೆ ಆದೇಶಿಸಲಾಗಿದೆ. ಇದರ ಜೊತೆಗೆ ಒಕ್ಕೂಟ ವ್ಯವಸ್ಥಾಪಕರನ್ನು ಹಿಂಪಡೆದು ಹೊಸ ವ್ಯವಸ್ಥಾಪಕರನ್ನು ನೇಮಕ ಮಾಡಲಾಗಿದೆ. ಅದರೊಂದಿಗೆ 6 ಜನರನ್ನು ಅಮಾನತು ಮಾಡಲಾಗಿದೆ. ತಪ್ಪು ಎಸೆಗಿದಂತಹ ಹಾಲು ಉತ್ಪಾದಕರಿಗೆ ಕ್ರಮ ಕೈಗೊಳ್ಳಲಾಗಿದೆ.


ಇದೇ ಸಂದರ್ಭದಲ್ಲಿ ಅವಘಾತದಿಂದ ನಿಧನರಾದ ಸಂಚಾರಿ ವಿಜಯ್ ಅವರಿಗೆ ಸಂತಾಪ ವ್ಯಕ್ತಪಡಿಸಿದರು. ಜೊತೆಗೆ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top