ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿರುವ ಕಾರಣ ಹಂತಹಂತವಾಗಿ ಲಾಕ್ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಇಂದು ಸಿಎಂ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ ನಿರ್ಬಂಧ ತೆರವು ಮಾಡುವುದು ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ.