ದಕ ಜಿಲ್ಲೆಯಲ್ಲಿ ಲಾಕ್‌ಡೌನ್ ಕೊಂಚ ಸಡಿಲಿಕೆ: ಅಗತ್ಯ ವಸ್ತು ಖರೀದಿಗೆ ಅವಧಿ ವಿಸ್ತರಣೆ

Upayuktha
0

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶವನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.


ರಾಜ್ಯಾದ್ಯಂತ ಅನ್‌ಲಾಕ್‌ 1.0 ಮಾರ್ಗಸೂಚಿ ಅನ್ವಯ ಪರಿಷ್ಕೃತ ಆದೇಶವನ್ನು ಬಿಡುಗಡೆ ಮಾಡಲಾಗಿದೆ.


ಮುಖ್ಯಾಂಶಗಳು: 

ಜಿಲ್ಲೆಯಾದ್ಯಂತ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಪ್ಯೂ ಜಾರಿ


ವಾರಾಂತ್ಯದ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕರ್ಪ್ಯೂ ಜಾರಿ


ಜಿಲ್ಲೆಯಾದ್ಯಂತ ಯಾವುದೇ ಬಸ್ ಸಂಚಾರಕ್ಕೂ ಅನುಮತಿ ‌ಇಲ್ಲ.


ನಾಳೆಯಿಂದ ಜುಲೈ 5ರ ಸಂಜೆಯವರೆಗೂ ವಿಸ್ತರಿಸಿ ಆದೇಶ


ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸೆಲ್‌ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ.


ಜಿಲ್ಲೆಯಲ್ಲಿ ಪಾರ್ಕ್ ಮತ್ತು ಸಾರ್ವಜನಿಕ ಉದ್ಯಾನ ತೆರೆಯಲು ಅವಕಾಶ ಇಲ್ಲ.


ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳಿಗೆ ಅನುಮತಿ.


ಅಟೋ ರಿಕ್ಷಾ ಮತ್ತು ಟ್ಯಾಕ್ಸಿ ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದು.


ಕೆಎಸ್ಆರ್‌ಟಿಸಿ ಬಸ್ಸುಗಳು ಜಿಲ್ಲೆಯಿಂದ ಹೊರಗೆ ಹಾಗೂ ಒಳಗೆ ಓಡಾಟವಿಲ್ಲ


ಹೊರ ಜಿಲ್ಲೆಯಿಂದಲೂ ಕೆಎಸ್‌ಆರ್‌ಟಿಸಿ ಬಸ್ಸು ಓಡಾಟಕ್ಕೆ ನಿರ್ಬಂಧ


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top