ಡೆಲ್ಟಾ ಪ್ಲಸ್ ಸೋಂಕಿನ ಆತಂಕ: ಗೋವಾ ಗಡಿ ಸಂಪೂರ್ಣ ಬಂದ್

Upayuktha
0


ಕಾರವಾರ: ಡೆಲ್ಟಾ ಪ್ಲಸ್ ಸೋಂಕಿನ ಆತಂಕದ ಹಿನ್ನಲೆಯಲ್ಲಿ ಗೋವಾದ ಸರ್ಕಾರ ಗಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಕಾರವಾರದಿಂದ ಗೋವಾಕ್ಕೆ ಪ್ರತಿನಿತ್ಯ ಕೆಲಸಕ್ಕೆ ತೆರಲುತ್ತಿರುವ ಕಾರ್ಮಿಕರು ಹಾಗೂ ಉದ್ಯೋಗಿಗಳು ಪರದಾಡುವ ಪರಿಸ್ಥಿತಿ ಮುಂದಾಗಿದೆ.


ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ವೈರಸ್‍ನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಇದು ಗಡಿ ರಾಜ್ಯಗಳಾದ ಗೋವಾ ಮತ್ತು ಕರ್ನಾಟಕಕ್ಕೆ ಆತಂಕ ನಿರ್ಮಾಣವಾಗಿದೆ. ಈ ಕಾರಣಕ್ಕಾಗಿ ಗೋವಾ ಸರ್ಕಾರ ತನ್ನ ಗಡಿಯನ್ನು ಸಂಪೂರ್ಣ ಬಂದ್ ಮಾಡಿದೆ.


ಇದರಿಂದಾಗಿ ಕರ್ನಾಟಕ ಗೋವಾ ಗಡಿಭಾಗವಾದ ಮಾಜಾಳಿ ಚೆಕ್ ಪೋಸ್ಟ್‌ನಲ್ಲಿ ಗೋವಾ ಸರ್ಕಾರ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಂಡಿದೆ. ಇಂತಹ ದಿಢೀರ್ ನಿರ್ಧಾರದಿಂದ ಗೋವಾಗೆ ದಿನ ನಿತ್ಯದ ಕೆಲಸಕ್ಕೆ ತೆರಳಬೇಕಾಗಿದ್ದ ನೂರಾರು ಕಾರ್ಮಿಕರು ಹಾಗೂ ವಿವಿಧ ಕಂಪನಿ ಉದ್ಯೋಗಿಗಳು ಕೆಲಸಕ್ಕೆ ತೆರಳಲು ಸಾಧ್ಯವಾಗದ ಸ್ಥಿತಿ ಎದುರಾಗಿದೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top