ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ವಿಸ್ತೃತ ಗ್ರಂಥಾಲಯ ವಿಭಾಗ ಉದ್ಘಾಟನೆ

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ಗ್ರಂಥಾಲಯವನ್ನು ಮಂಜೂಷಾ ವಸ್ತು ಸಂಗ್ರಹಾಲಯದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದ್ದು, ಶ್ರುತ ಪಂಚಮಿಯ ಶುಭ ದಿನವಾದ ಮಂಗಳವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಶ್ರೀಮತಿ ಹೇಮಾವತಿ ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು.


ಗ್ರಂಥಾಲಯದಲ್ಲಿ 4,707 ತಾಡೋಲೆ ಹಸ್ತಪ್ರತಿಗಳು, 1468 ಕಾಗದ ಹಸ್ತಪ್ರತಿಗಳು, 302 ಕಲ್ಲಚ್ಚಿನ ಪ್ರತಿಗಳು ಹಾಗೂ 25,637 ಮುದ್ರಿತ ಪುಸ್ತಕಗಳ ಅಮೂಲ್ಯ ಸಂಗ್ರಹವಿದೆ.

ಕನ್ನಡ, ಇಂಗ್ಲಿಷ್, ಸಂಸ್ಕೃತ, ತುಳು, ಮರಾಠಿ, ತೆಲುಗು, ಪ್ರಾಕೃತ ಹಾಗೂ ಪಾಲಿ ಭಾಷೆಯಲ್ಲಿ ರಚಿಸಿದ ಅನೇಕ ಕೃತಿಗಳಿವೆ.


ವಿವಿಧ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರುಗಳು, ವಿದ್ಯಾರ್ಥಿಗಳು ಮತ್ತು ಸಂಶೋಧಕರು ಇಲ್ಲಿ ಬಂದು ತಮ್ಮ ಅಧ್ಯಯನ ಮತ್ತು ಸಂಶೋಧನೆಗೆ ಗ್ರಂಥಾಲಯದ ಸದುಪಯೋಗ ಪಡೆಯುತ್ತಾರೆ.


ಖ್ಯಾತ ಇತಿಹಾಸ ತಜ್ಞ ಮಂಡ್ಯದ ಪ್ರೊ. ಎಚ್.ವಿ. ನರಸಿಂಹಮೂರ್ತಿಯವರು ಇತಿಹಾಸ ಮತ್ತು ಸಂಶೋಧನೆಗೆ ಸಂಬಂಧಿಸಿದ ಒಂದು ಸಾವಿರ ಪುಸ್ತಕಗಳನ್ನು ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ.


ಮೈಸೂರಿನ ಸಮುದಾಯ ಅಧ್ಯಯನ ಕೇಂದ್ರ ಪ್ರಣತಾ ಅವರು 29 ಅಮೂಲ್ಯ ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡಿರುತ್ತಾರೆ.


ಡಿ. ಸುರೇಂದ್ರ ಕುಮಾರ್, ಶ್ರೀಮತಿ ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಅಮಿತ್, ಶ್ರೀಮತಿ ಶ್ರದ್ಧಾ ಅಮಿತ್, ಮಾನ್ಯ, ಡಾ. ಬಿ. ಯಶೋವರ್ಮ, ಶ್ರೀಮತಿ ಸೋನಿಯಾವರ್ಮ, ಡಿ. ಶ್ರೇಯಸ್ ಕುಮಾರ್, ಡಿ. ನಿಶ್ಚಲ್ ಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಡಾ. ವಿಘ್ನರಾಜ ಎಸ್.ಆರ್ ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top