ಮಂಗಳೂರು, ಜೂನ್:- ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ರಾಜ್ಯದಲ್ಲಿ ಕೋವಿಡ್-19 ವಿಪತ್ತಿನಿಂದ ಬಾಧಿತ ಮಕ್ಕಳನ್ನು ಬೆಂಬಲಿಸಲು ಹೆಚ್ಚಿನ ಸಂದರ್ಭಗಳಲ್ಲಿ ಮಗುವಿಗೆ ಪಾಲನೆ ಮತ್ತು ರಕ್ಷಣೆಯನ್ನು ಒದಗಿಸಲು ವಿಸ್ತೃತಕುಟುಂಬ/ಏಕಪೋಷಕ ನೆರವಿದ್ದರೂ ಸಹ ತಂದೆ/ತಾಯಿಯನ್ನು ಕಳೆದುಕೊಂಡ 18 ವರ್ಷದೊಳಗಿನ ಮಗುವನ್ನು ಮಾನಸಿಕ ಆಘಾತದಿಂದ ಹೊರತರಲು ಹಾಗೂ ಮಗುವಿನ ದೀರ್ಘಕಾಲಿಕ ಸಕಾರಾತ್ಮಕ ಬೆಳವಣಿಗೆಗೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅನುವಾಗುವಂತೆ “ಬಾಲಹಿತೈಷಿ” ಎಂಬ ಹೊಸ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಆದ್ದರಿಂದ ಇಬ್ಬರು ಪೋಷಕರು ಅಥವಾ ಪೋಷಕರಲ್ಲಿ ಒಬ್ಬರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಮಕ್ಕಳಿಗೆ ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ತಮ್ಮ ಅತ್ಯುನ್ನತ ಸಾಮಥ್ರ್ಯವನ್ನು ಸಾಧಿಸಲು ಅವರಿಗೆ ಸಹಾಯ ಮಾಡಲು ಮತ್ತು ಮಗುವಿಗೆ ಮಾರ್ಗದರ್ಶನ ನೀಡಲು ಉತ್ಸುಕರಾಗಿರುವ ಯಾವುದೇ ವ್ಯಕ್ತಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ನೋಂದಾಯಿಸಿಕೊಳ್ಳಬಹುದು. ವೆಬ್‍ಸೈಟ್ https://icps.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿಯ ದೂರವಾಣಿ ಸಂಖ್ಯೆ:0824-2440004, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರ ದೂ.ಸಂಖ್ಯೆ: 0824-2485401, ಮಕ್ಕಳ ಆಪ್ತ ಸಮಾಲೋಚನೆ ಸಂಖ್ಯೆ: 0824-14499 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ