ಹೇಗೆ ಕಾಣುತ್ತಿದೆ ನೋಡಿ ಮೈದುಂಬಿರುವ ತುಂಗಾ ಜಲಾಶಯ
ಶಿವಮೊಗ್ಗ: ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 2.30ರ ವೇಳೆಗೆ ಒಟ್ಟು 9500 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದೆ.
ಇಂದು ಮುಂಜಾನೆ 21 ಗೇಟ್‌ಗಳನ್ನು ಒಂದು ಇಂಚು ಮೇಲೆತ್ತಿ ನೀರು ಹರಿಸಲಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
588.22ಮೀ ಪ್ರಮಾಣದ ಅಣೆಕಟ್ಟೆಗೆ 3784 ಕ್ಯೂಸೆಕ್ಸ್ ಒಳಹರಿವಿದ್ದು, 1500 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿತ್ತು. ಆದರೆ, ಮಧ್ಯಾಹ್ನದ ವೇಳೆಗೆ ಒಟ್ಟು ಹೊರಹರಿವಿನ ಪ್ರಮಾಣವನ್ನು 9500 ಕ್ಯೂಸೆಕ್ಸ್'ಗೆ ಏರಿಕೆ ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ತೀರ್ಥಹಳ್ಳಿ ಭಾಗದಲ್ಲಿ ಸತತವಾಗಿ ಮಳೆಯಾಗುತ್ತಿರುವ ಕಾರಣ ಅಣೆಕಟ್ಟೆಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಇನ್ನು ಮೂರು-ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ