ಶಿವಮೊಗ್ಗ: ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆ ಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದ ವಿಶ್ವ ವಿಖ್ಯಾತ ಜೋಗ್ ಫಾಲ್ಸ್’ಗೆ ನಾಳೆಯಿಂದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿದೆ.
ಬೆಳಗ್ಗೆ 10 ರಿಂದ ಸಂಜೆ 05ಗಂಟೆಯವರೆಗೆ ಜಲಪಾತ ವೀಕ್ಷಣೆಗೆ ಅವಕಾಶವಿದ್ದು ಕೆಲವೊಂದು ಮುಂಜಾಗ್ರತಾ ಕ್ರಮಗಳ ಪಾಲನೆ ಕಡ್ಡಾಯವಾಗಿದೆ.
ಪ್ರವಾಸಿಗರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಸುವುದು ಸೇರಿದಂತೆ ಹಲವು ನಿಯಮಗಳನ್ನು ಕಡ್ಡಾಯ ವಾಗಿ ಪಾಲಿಸಬೇಕೆಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಮಕೃಷ್ಣ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ