ಬೆಂಗಳೂರು: ಕೊರೋನಾ ಮೂರನೇ ಅಲೆ ಬರುವುದಕ್ಕಿಂತ ಮೊದಲು ಮಕ್ಕಳಿಗೆ ಡ್ರೈಫ್ರೂಟ್ಸ್, ಹಾಲು, ಬಾದಾಮಿ ಪುಡಿ, ಜೊತೆಗೆ ವಿಟಮಿನ್ ಮಾತ್ರೆಗಳಂತಹ ನ್ಯೂಟ್ರಿಷನ್ ಕಿಟ್‍ಗಳನ್ನು ವಿತರಿಸಲಾಗುತ್ತದೆ. ಎಂದು ವಿಪತ್ತು ನಿರ್ವಹಣಾ ನಿಧಿಯಡಿ ಹಣ ಬಿಡುಗಡೆ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಕೊರೋನಾ ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರದಿಂದ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನ್ಯೂಟ್ರಿಷನ್ ಕಿಟ್ ಒದಗಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರತಿ ಜಿಲ್ಲೆಗಳಲ್ಲಿ ಸರಿ ಸುಮಾರು 1 ಸಾವಿರದಿಂದ 3 ಸಾವಿರದವರೆಗೆ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿದ್ದಾರೆ. ಈ ಕಾರಣದಿಂದ ಸಮೀಕ್ಷೆಯನ್ನು ಆರಂಭಿಸಲಾಗಿದ್ದು, ಶೀಘ್ರ ಕಿಟ್ ವಿತರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ