ಮಂಗಳಮುಖಿಯರಿಗೆ ಸರ್ಕಾರಿ ಉದ್ಯೋಗದಲ್ಲಿ 1% ಮೀಸಲಾತಿ

Upayuktha
0

 



ಬೆಂಗಳೂರು: ಮಂಗಳಮುಖಿಯರಿಗೆ ಉದ್ಯೋಗದಲ್ಲಿ ಶೇಕಡ 1 ರಷ್ಟು ಮೀಸಲಾತಿ ನೀಡಲು ಸರ್ಕಾರ ಮುಂದಾಗಿದ್ದು, ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಈ ಬಗ್ಗೆ ಮಾಹಿತಿ ನೀಡಲಾಗಿದೆ.


ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ಮಂಗಳಮುಖಿಯರಿಗೆ ಶೇಕಡ 1 ರಷ್ಟು ಮೀಸಲಾತಿ ನೀಡುವ ಬಗ್ಗೆ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೈಕೋರ್ಟ್ ಗೆ ಸರ್ಕಾರ ತಿಳಿಸಿದೆ.


ಲೈಂಗಿಕ ಅಲ್ಪಸಂಖ್ಯಾತರು, ಹೆಚ್‌ಐವಿ ಪೀಡಿತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಗಮ ಸ್ವಯಂಸೇವಾ ಸಂಸ್ಥೆ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆದಿದೆ.


ಈ ಬಗ್ಗೆ ಸರ್ಕಾರಿ ವಕೀಲರಾದ ವಿಜಯಕುಮಾರ ಪಾಟೀಲ ವಾದ ಮಂಡಿಸಿ, ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ಮಂಗಳಮುಖಿಯರಿಗೆ ಶೇಕಡ 1 ರಷ್ಟು ಮೀಸಲಾತಿ ನೀಡಲು ಕರ್ನಾಟಕ ನಾಗರೀಕ ಸೇವಾ ನೇಮಕಾತಿ ನಿಯಮಕ್ಕೆ ತಿದ್ದುಪಡಿ ಸೇರ್ಪಡೆ ಮಾಡಲಾಗುವುದು.


ಕರಡು ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಯ ನಂತರ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. ಇದಕ್ಕೆ ಕಾಲಾವಕಾಶ ಬೇಕಾಗಿದೆ ಎಂದು ಹೇಳಿದ್ದಾರೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top