ಅಸಂಘಟಿತ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್: ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ

Upayuktha
0


ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೋವಿಡ್-19ರ 2ನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಕಾರಣ ಲಾಕ್‍ಡೌನ್ ಜಾರಿಗೊಳಿಸಿರುವ ಪರಿಣಾಮವಾಗಿ ಕಾರ್ಮಿಕರಿಗೆ ಆರ್ಥಿಕವಾಗಿ ನಷ್ಟವಾಗಿರುವುದನ್ನು ಗಮನಿಸಿ, 11 ವರ್ಗಗಳ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಕಾರ್ಮಿಕರಿಗೆ 2,000 ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ ನೀಡಲಾಗುವುದು.


ಸದರಿ ವರ್ಗದ 18-65 ವಯೋಮಾನದ, ಬಿ.ಪಿ.ಎಲ್ ಕುಟುಂಬದ, ಓರ್ವ ಫಲಾನುಭವಿಯು ಮಾತ್ರ ಅರ್ಹರಾಗಿದ್ದು, ಆಧಾರ್ ಸಂಖ್ಯೆ ಲಿಂಕ್‍ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ನಿಗದಿತ ವೃತ್ತಿ ನಿರ್ವಹಿಸುತ್ತಿರುವ ಕುರಿತು ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇವಾ ಕೇಂದ್ರಗಳು/ ವಾರ್ಡ್ ಮಟ್ಟದ ಸೇವಾ ಕೇಂದ್ರಗಳು/ಸಾಮಾನ್ಯ ಸೇವಾ ಕೇಂದ್ರಗಳು ಅಥವಾ ಕಾರ್ಮಿಕ ಸೇವಾ ಕೇಂದ್ರಗಳಲ್ಲಿ https://sevasindhu.karnataka.gov.in/ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top