ಮುಂಗಾರು ಪ್ರಬಲ: ಕಾಸರಗೋಡು ಜಿಲ್ಲೆಯಲ್ಲಿ ಧಾರಾಕಾರ ಮಳೆ

Upayuktha
0


ಕಾಸರಗೋಡು: ಜಿಲ್ಲೆಯೂ ಸೇರಿದಂತೆ ಕೇರಳದ 14 ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಸುರಿಯುತ್ತಿದೆ. ಕೇರಳಕ್ಕೆ ನೈಋತ್ಯ ಮುಂಗಾರು ಆಗಮನವಾಗಿದ್ದು , ಈ ಹಿನ್ನೆಲೆಯಲ್ಲಿ ಮಳೆ ಆರಂಭವಾಗಿದೆ ಎಂದು ತಿರುವನಂತಪುರದ ಕೇಂದ್ರ ಹವಾಮಾನ ಇಲಾಖೆಯು ತಿಳಿಸಿದೆ. ಕಾಸರಗೋಡು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿರುಸಿನ ಮಳೆಯಾಗುತ್ತಿದ್ದು, ಭಾನುವಾರವೂ ಮುಂದುವರಿದಿದೆ.


ಈ ಮಧ್ಯೆ ಕೇರಳದಲ್ಲಿ ಜೂನ್ 16ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ವಯನಾಡು ಮತ್ತು ಪಾಲಕ್ಕಾಡು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ 12 ಜಿಲ್ಲೆಗಳಲ್ಲಿ ಭಾನುವಾರ ಯಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಜೂ.15 ರಂದು ಇಡುಕ್ಕಿ , ಕಣ್ಣೂರು, ಕಲ್ಲಿಕೋಟೆ ಜಿಲ್ಲೆಗಳಲ್ಲಿ ಹಾಗೂ ಜೂ.16 ರಂದು ಕಲ್ಲಿಕೋಟೆ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಕೇರಳದ ವಿವಿಧ ಭಾಗಗಳಲ್ಲಿ ಭಾನುವಾರ ಇಡೀ ದಿನ ಮಳೆ ಸುರಿದಿದೆ. ಅಲ್ಲದೆ ಕೇರಳ ಹಾಗೂ ಲಕ್ಷದ್ವೀಪ ಕರಾವಳಿಯುದ್ದಕ್ಕೂ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಸಮುದ್ರದಲ್ಲಿ ಅಲೆಗಳು ಏರುವ ಸಾಧ್ಯತೆಗಳಿವೆ. ಸಮುದ್ರ ಮಟ್ಟ ಏರಿಕೆಯಾಗುವುದರಿಂದ ಕೇರಳದ ಕರಾವಳಿಯಲ್ಲಿ ಜೂ.16 ರ ತನಕ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.


ಕಾಸರಗೋಡು ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ಜಾಗೃತಾ ನಿರ್ದೇಶನ ನೀಡಲಾಗಿದೆ. ಜೊತೆಗೆ ಗುಡ್ಡ ಪ್ರದೇಶ ವ್ಯಾಪ್ತಿಯಲ್ಲಿ ಭೂಕುಸಿತದಂತಹ ಸಾಧ್ಯತೆಗಳ ಬಗ್ಗೆ ಎಚ್ಚರಿಕೆ ನೀಡಲಾಗಿದೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top