ಪುಂಜಾಲಕಟ್ಟೆ: ಸ.ಪ್ರ.ದ ಕಾಲೇಜಿನಲ್ಲಿ ಸ್ಮಾರ್ಟ್‌ ಕ್ಲಾಸ್ ಉದ್ಘಾಟನೆ, ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳ ವಿತರಣೆ

Upayuktha
0

ಬೆಳ್ತಂಗಡಿ: ಕರ್ನಾಟಕ ಸರಕಾರದ ಮಹತ್ವಕಾಂಕ್ಷೆ ಯೋಜನೆಯಡಿಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್‍ಲೆಟ್ ಪಿಸಿಗಳನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರು ವಿತರಿಸಿದರು.


ನಂತರ ಕಾಲೇಜಿನಲ್ಲಿ Smart Class Room ನ ಉದ್ಘಾಟನೆಯನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸರಕಾರದ ಈ ಮಹತ್ವದ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು. ಲಾಕ್‍ಡೌನ್‍ನ ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ Online Class ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆ ಟ್ಯಾಬ್‍ಲೆಟ್ ಪಿಸಿಗಳನ್ನು ನೀಡಲಾಗಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್ ಕುಳಮರ್ವ ಇವರು ವಹಿಸಿದ್ದರು.


ಸಾಂಕೇತಿಕವಾಗಿ 10 ವಿದ್ಯಾರ್ಥಿಗಳಿಗೆ ಟ್ಯಾಬ್‍ಲೆಟ್ ಪಿಸಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮ ಪ್ರಸ್ತಾವನೆ ಡಾ. ವಿಶಾಲ್ ಪಿಂಟೋರವರು ಮಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಐಕ್ಯೂಎಸಿ ಸಂಚಾಲಕರಾದ ಪ್ರೊ.ರವಿಶಂಕರ್‌ ಅವರು ವಂದಿಸಿದರು. ಬೋಧಕರು ಹಾಗೂ ಬೋಧಕೇತರ ವರ್ಗದವರು ಹಾಗೂ ಆಯ್ಕೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಹಾಜರಿದ್ದರು. 


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top