ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ 'ಮಳೆ' ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Upayuktha
0


ಪ್ರಾತಿನಿಧಿಕ ಚಿತ್ರ


ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿ ದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನ ಜೂನ್ 17 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ( ಜೂ.13) ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರದಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17 ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ದಕ್ಷಿಣ ಒಳನಾಡಿನಲ್ಲಿ ಕೂಡ ಸೋಮವಾರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿದ್ದಾರೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top