ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರಿ ಮಳೆಯಾಗುವ ಸಾಧ್ಯತೆ

Upayuktha
0


ಮಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇಂದು ಹಲವು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಸಾಮಾನ್ಯ ಮಳೆ ಸುರಿಯಲಿದ್ದು, ಜೂನ್ 10 ಮತ್ತು 11 ರಂದು ಭಾರೀ ಮಳೆಯಾಗುವ ಸಂಭವವಿದೆ.  

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಾದ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡಿನಲ್ಲೂ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. 

ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್‍ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.  

ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.


(ಉಪಯುಕ್ತ ನ್ಯೂಸ್)

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top