ಜೂನ್ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

Upayuktha
0

 


ಬೆಂಗಳೂರು: ರಾಜ್ಯದಲ್ಲಿ ಜೂನ್ 18ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.  

ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾದ ಪರಿಣಾಮ ರಾಜ್ಯದೆಲ್ಲೆಡೆ ಇನ್ನೆರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜೂನ್ 16 ಮತ್ತು 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.  

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮುಂತಾದ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಜೂನ್ 17 ಮತ್ತು 18ಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top