ಸೋಮವಾರದಿಂದ ಮದುವೆಗಳಿಗೆ ಅನುಮತಿ, 40 ಜನರ ಮಿತಿ; ಪಾಸ್‌ ಪಡೆದವರಷ್ಟೇ ಉಪಸ್ಥಿತಿ

Upayuktha
0


ಬೆಂಗಳೂರು: ಸರ್ಕಾರವು ಮದುವೆ ಸಮಾರಂಭಕ್ಕೆ 40 ಜನರ ಮಿತಿಯನ್ನು ಹೇರಿದ್ದು, ರಾಜ್ಯಾದ್ಯಂತ ಕಲ್ಯಾಣ ಮಂಟಪ, ಹೋಟೆಲ್ ಸಭಾಂಗಣ ಮತ್ತು ರೆಸಾಟ್‍ಗಳಲ್ಲಿ ಮದುವೆ ಸಮಾರಂಭಗಳನ್ನು ನಡೆಸಲು ಸೋಮವಾರದಿಂದ ಅವಕಾಶ ಕಲ್ಪಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.  


ಕೊರೊನಾ ವೈರಾಣು ನಿಯಂತ್ರಣದ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೈಗೊಂಡ ತಿರ್ಮಾನದ ಬಳಿಕ ಈ ಆದೇಶವನ್ನು ಹೊರಡಿಸಲಾಗಿದೆ. ಪಾಸ್ ಹೊಂದಿದವರು ಮಾತ್ರ ಮದುವೆ ಸಮಾರಂಭಕ್ಕೆ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಜೊತೆಗೆ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಕೂಡ ಆದೇಶ ಹೊರಡಿಸಲಾಗಿದೆ.  


ಬಿಬಿಎಂಪಿ ವ್ಯಾಪ್ತಿಯಲ್ಲಿ ಜಂಟಿ ಆಯುಕ್ತರು ಮತ್ತು ಇತರ ಪ್ರದೇಶಗಳಲ್ಲಿ ಆಯಾ ತಾಲೂಕಿನಲ್ಲಿ ತಹಶೀಲ್ದಾರ್‍ಗಳಿಂದ ಅನುಮತಿ ಪಡೆದು ನಂತರ ಮದುವೆ ಸಮಾರಂಭಗಳನ್ನು ನಡೆಸಬಹುದು ಎಂದು ತಿಳಿಸಿದರು.

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top