ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ

Upayuktha
0



ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಮೇಯರ್‌ ಚುನಾವಣೆಯನ್ನು ನ್ಯಾಯಾಲಯದ ತಡೆಯಾಜ್ಞೆಯಂತೆ ಮುಂದೂಡಲಾಗಿದೆ.


ಪಾಲಿಕೆಯ ಕಾಂಗ್ರೆಸ್‌ ಸದಸ್ಯ ಪ್ರದೀಪ್‌ ಚಂದ್ರ ಹೈಕೋರ್ಟ್‌ನಿಂದ ತಡೆಯಾಜ್ಞೆ ಜಾರಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಇದೀಗ ಕೋವಿಡ್‌ ನಿಯಂತ್ರಣಕ್ಕೆ ಬಾರದಿರುವ ಹಾಗೂ ಲಾಕ್‌ಡೌನ್‌ ಇರುವಾಗ ಚುನಾವಣೆ ನಡೆಸುವುದರಿಂದ ಗಲಭೆಗಳು ನಡೆದರೆ, ಈ ಕಾರಣದಿಂದ ಜೂನ್ 21ರವರೆಗೆ ಯಾವುದೇ ಚುನಾವಣೆ ನಡೆಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.


ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಚುನಾವಣೆಗೆ ಅವಕಾಶ ನೀಡಬಾರದು ಎಂದು ಕೋರಿದ್ದರು. ಇವರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿರುವ ಹೈಕೋರ್ಟ್‌ ಚುನಾವಣೆಗೆ ತಡೆಯಾಜ್ಞೆ ನೀಡಿದೆ.


ಮೈಸೂರು ಪ್ರಾದೇಶಿಕ ಆಯುಕ್ತರ ಸೂಚನೆಯಂತೆ ತಡೆಯಾಜ್ಞೆ ಇರುವ ಕಾರಣ ಚುನಾವಣೆಯನ್ನು ಮುಂದೂಡಿರುವುದಾಗಿ ಪಾಲಿಕೆ ಆಯುಕ್ತ ಲಕ್ಷ್ಮೀ ಕಾಂತ ರೆಡ್ಡಿ ಹೇಳಿಕೆ ನೀಡಿದ್ದಾರೆ.


ಜೂ. 11ರಂದು ಮೇಯರ್‌ ಆಯ್ಕೆಗೆ ಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿತ್ತು. ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.

Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top