ಬೆಂಗಳೂರು: ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ನಡೆಯಬೇಕಿದ್ದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯನ್ನು ಮುಂದೂಡಿ, ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್ ಪ್ರಸಾದ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರಿಗೆ, ಯೋಜನಾ ನಿರ್ದೇಶಕರಿಗೆ ಪತ್ರ ಬರೆದಿದ್ದು, ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಠಿಯಿಂದ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಸುವುದು ಬಾಕಿ ಇದ್ದಲ್ಲಿ, ಚುನಾವಣೆಯನ್ನು ಕೂಡಲೇ ಮುಂದೂಡುವಂತೆ ನಿರ್ದೇಶನ ನೀಡಲಾಗಿದೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ