ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಉದ್ಯೋಗ ಮಾಹಿತಿ ಕೋಶದ ಮತ್ತು IQAC ವತಿಯಿಂದ 'ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿ" ಇದರ ಬಗ್ಗೆ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಪದವಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಹೇಮಚಂದ್ರ ಎಸ್.ಜೇ ಸಹಾಯಕ ನಿರ್ದೇಶಕರು University Employment and Informative Guidness Bureau ಮಂಗಳೂರು ವಿಶ್ವವಿದ್ಯಾನಿಲಯ ಇವರು ಆಗಮಿಸಿದ್ದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾಡಿದ ಇವರು, ವಿವಿಧ ಇಲಾಖೆಗಳು ನಡೆಸುವ ಬಗೆ ಬಗೆಯ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ನೀಡಿದರು, ಪರೀಕ್ಷೆ ಬರೆಯಲು ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುವುದನ್ನು ತಿಳಿಸಿದರು.
ಈ ಕಾರ್ಯಾಗಾರದಲ್ಲಿ ಉದ್ಯೋಗ ಮಾಹಿತಿ ಕೋಶದ ಸಂಚಾಲಕರಾದ ಪ್ರೊ.ಗೀತಾ ಹಾಗೂ IQAC ಇದರ ಸಂಚಾಲಕರಾದ ಪ್ರೊ.ರವಿಶಂಕರ್. ಬಿ ಉಪಸ್ಥಿತರಿದ್ದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಗಣಪತಿ ಭಟ್ ಕುಳಮರ್ವ ಇವರು ಕಾರ್ಯಕ್ರಮದ ಬಗ್ಗೆ ಹಿತನುಡಿಗಳನ್ನಾಡಿದರು.
ಎಲ್ಲಾ ಪದವಿಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಸುಶ್ಮಿತಾ ಸ್ವಾಗತಿಸಿ ಅಮೃತ ವಂದಿಸಿದರು. ಸ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ