ಮಂಗಳೂರು: ಕೋವಿಡ್-19ರ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟು ನಡೆಸಲು ಬಾಕಿ ಇರುವ ಏಪ್ರಿಲ್ 2021 ರ 1, 3, 5 ಮತ್ತು 7ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ಆಗಸ್ಟ್ 2, 2021ರಿಂದ ನಡೆಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ. ಇದೇ ವೇಳೆ 1 ಮತ್ತು 3ನೇ ಸೆಮಿಸ್ಟರ್‌ನ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನೂ ಆಗಸ್ಟ್ 5, 2021 ರಿಂದ ನಡೆಸಲು ಉದ್ದೇಶಿಸಲಾಗಿದೆ.
ಸರ್ಕಾರ ಸೂಚಿಸಿರುವ ಕೋವಿಡ್ ನಿಯಂತ್ರಣ ನಿಯಮಗಳ ಕಠಿಣ ಪಾಲನೆಯೊಂದಿಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂಚಿತವಾಗಿ ಮಾಹಿತಿ ನೀಡಿರುವ ವಿಶ್ವವಿದ್ಯಾನಿಲಯ, ಕಾಲೇಜುಗಳಿಗೆ ಪರೀಕ್ಷಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಸೂಚನೆಯಲ್ಲಿ ತಿಳಿಸಿದೆ.
Key Words: Mangalore University, Exams, MU Exam Time Table, ಮಂಗಳೂರು ವಿವಿ, ಪರೀಕ್ಷಾ ವೇಳಾಪಟ್ಟಿ,
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ