ಎಸ್‍ಎಸ್‍ಎಲ್‍ಸಿ ಪ್ರವೇಶ ಪತ್ರದ ಮಾಹಿತಿಗೆ ಸಹಾಯವಾಣಿ

Upayuktha
0

ಪ್ರಾತಿನಿಧಿಕ ಚಿತ್ರ


ಮಂಗಳೂರು: 2021ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಜುಲೈ 19 ಮತ್ತು 22 ರಂದು ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 32,657 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.


ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಆಯಾ ಶಾಲಾ ಲಾಗಿನ್‍ನಲ್ಲಿ ಲಭ್ಯವಿದ್ದು ಶಾಲಾ ಮುಖ್ಯಸ್ಥರ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶಪತ್ರಗಳನ್ನು ವಿತರಿಸಲಾಗಿದೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಪ್ರೌಢಶಾಲೆಗಳು ಪ್ರವೇಶಪತ್ರವನ್ನು ಸಕಾಲದಲ್ಲಿ ವಿತರಿಸದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಆಡಳಿತ ಉಪನಿರ್ದೇಶಕರ ಮೊ.ಸಂ:  9448999337, ಜಿಲ್ಲಾ ಎಸ್‍ಎಸ್‍ಎಲ್‍ಸಿ  ನೋಡಲ್ ಅಧಿಕಾರಿ ಮೊ.ಸಂ: 7892758498, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ:  9480695156,  ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ:  9480695157, ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ: 9480695158, ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ: 9480695159, ಮೂಡಬಿದ್ರೆ ಕ್ಷೇತ್ರ ಶಿಕ್ಷಣಾಧಿಕಾರಿ  ಮೊ.ಸಂ: 9480695160, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ: 9480695161, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ: 9480695162 ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಆಡಳಿತ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



Post a Comment

0 Comments
Post a Comment (0)
To Top