ಮಂಗಳೂರು ವಿಮಾನ ನಿಲ್ದಾಣದ ರನ್ ವೇಗೆ ನುಗ್ಗಿದ ವ್ಯಕ್ತಿ ಪೊಲೀಸ್ ವಶಕ್ಕೆ

Upayuktha
0


ಮಂಗಳೂರು: ಸೋಮವಾರ ರಾತ್ರಿ 11 ಗಂಟೆ ಸಮಯಕ್ಕೆ ಸಿಐಎಸ್ಎಫ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ‌ ರನ್ ವೇ ಕಾಮಗಾರಿ ನಡೆಯುತ್ತಿದ್ದು ಆ ಸ್ಥಳದಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಕಂಡು ಬಂದಿದ್ದು ಆತನನ್ನು ಹಿಡಿದು ವಿಚಾರಿಸಲಾಗಿದೆ.


ತಾನು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬಧುಹಾ ಗ್ರಾಮದ ನಿವಾಸಿ ರಾಕೇಶ್, ತಂದೆಯ ಹೆಸರು ಬಬ್ಲೂ ಎಂದು ತಿಳಿಸಿದ್ದಾನೆ. ತಾನು ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು ಇಲ್ಲೇ ಸಮೀಪದಲ್ಲಿ ಲಾರಿ ಡ್ರೈವರ್ ತನ್ನನ್ನು ಸಂಬಳ ನೀಡದೆ ಬಿಟ್ಟು ಹೋಗಿದ್ದಾನೆ. ಬೇರೆ ದಾರಿ ಕಾಣದೇ ವಿಮಾನ ನಿಲ್ದಾಣ ಎಂದು ತಿಳಿಯದೇ ಈ ಭಾಗಕ್ಕೆ ಬಂದಿರುತ್ತೇನೆ ಎಂದು ವಿಚಾರಣೆ ವೇಳೆ ತಿಳಿಸಿರುತ್ತಾನೆ.


ನಂತರ ಸಿಐಎಸ್ಎಫ್ ನವರು ದೂರು ನೀಡಿದಂತೆ, ನಿ಼ಷೇಧಿತ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿರುತ್ತಾನೆ ಎಂಬ ದೂರಿನನ್ವಯ ಬಜಪೆ ಠಾಣಾ ಅ.ಕ್ರ 129/2021 ಕಲಂ:448 ಐಪಿಸಿ ಮತ್ತು 3A(b) THE SUPPRESSION OF UNLAWFUL AGAINST SAFETY OF CIVIL AVIATION ACT 1982 ರಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Key Words: Mangaluru Airport, Crime, 

(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top