ಕಾರವಾರ/ ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ವತಿಯಿಂದ ಜ್ಞಾನ ವಿಜ್ಞಾನ ಚಿಂತನ ಸತ್ರ ಸರಣಿಯ ಐದನೇ ವಿಚಾರ ಸಂಕಿರಣ ಹಾಗೂ ಸೇತುಬಂಧ-2021ರ ಸಮಾರೋಪ ಸಮಾರಂಭ ಈ ತಿಂಗಳ 11ರಂದು ಬೆಳಿಗ್ಗೆ 11:30ಕ್ಕೆ ನಡೆಯಲಿದೆ.
ಝೂಮ್ ಮೀಟಿಂಗ್ ವೇದಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ವಹಿಸುವರು. ಖ್ಯಾತ ಉದ್ಯಮಿ ಮತ್ತು ಸಮಾಜ ಸೇವಕ ಎಂ.ಎಸ್.ನರಹರಿ 'ಸಾಧನೆಯಲ್ಲಿ ಸಂಪತ್ತಿದೆ' ಎಂಬ ವಿಷಯದ ಬಗ್ಗೆ ವಿಚಾರ ಮಂಡಿಸುವರು ಎಂದು ವಿವಿವಿ ವಿದ್ಯಾ ಪರಿಷತ್ ಉಪಾಧ್ಯಕ್ಷ ಮರುವಳ ನಾರಾಯಣ ಭಟ್ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗಾಗಿ ವಿವಿವಿ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಪರೀಕ್ಷಾ ತರಬೇತಿ ಕಾರ್ಯಕ್ರಮ 'ಸೇತುಬಂಧ-2021'ರ ಸಮಾರೋಪವೂ ನಡೆಯಲಿದೆ. ವಿದ್ಯಾ ಪರಿಷತ್ ಅಧ್ಯಕ್ಷ ಎಂ.ಆರ್.ಹೆಗಡೆ, ಕಾರ್ಯದರ್ಶಿ ನೀಲಕಂಠ ಯಾಜಿ ಮತ್ತಿತರರು ಭಾಗವಹಿಸುವರು ಎಂದು ವಿವರಿಸಿದ್ದಾರೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶ. ಮೀಟಿಂಗ್ ಐಡಿ: 08705338243. ಪಾಸ್‍ಕೋಡ್: 500024
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ