ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಫೋಟೋಗ್ರಾಫರ್ಸ್ ಮತ್ತು ವೀಡಿಯೋಗ್ರಾಫರ್ಸ್ ಆಸೋಸಿಯೇಷನ್ , ಜಿಲ್ಲಾ ರೆಡ್ ಕ್ರಾಸ್ ಮತ್ತು ವಿಶ್ವವಿದ್ಯಾಲಯ ಕಾಲೇಜಿನ ವತಿಯಿಂದ, ಕಾಲೇಜಿನಲ್ಲಿ ಗುರುವಾರ ಛಾಯಾಗ್ರಾಹಕರು ಮತ್ತು ವೀಡಿಯೋಗ್ರಾಫರ್‌ಗಳಿಗೆ ಉಚಿತ ಕೊವಿಡ್-19 ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿವರಾಮ ಕಾರಂತ ಸಭಾಭವನದಲ್ಲಿ ನಡೆದ ಶಿಬಿರದಲ್ಲಿ ಸುಮಾರು 200 ಡೋಸ್ ಲಸಿಕೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಎಸ್.ಎ ಪ್ರಭಾಕರ ಶರ್ಮಾ, ರೆಡ್‌ಕ್ರಾಸ್ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷ ಯತೀಶ್ ಬೈಕಂಪಾಡಿ, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಫೋಟೋಗ್ರಾಫರ್ಸ್ ಮತ್ತು ವೀಡಿಯೋಗ್ರಾಫರ್ಸ್ ಆಸೋಸಿಯೇಷನ್ ಕಾರ್ಯದರ್ಶಿ ಹರೀಶ್ ಅಡ್ಯಾರ್ ಮೊದಲಾದವರು ಉಪಸ್ಥಿತರಿದ್ದರು.
Key Words: Vaccination camp, Covid vaccination, UCM, ಕೋವಿಡ್ ಲಸಿಕೆ, ಲಸಿಕಾ ಶಿಬಿರ
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ