ಮಂಗಳೂರು: ಕರ್ನಾಟಕ ರಾಜ್ಯಅಸಂಘಟಿತ ಪುರೋಹಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಘಟಕದ ಉದ್ಘಾಟನೆ ಇಂದು ನೆರವೇರಿತು.
ಪಣಂಬೂರಿನ ಶ್ರೀ ನಂದನೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ತಂತ್ರಿವರೇಣ್ಯರಾದ ಬ್ರಹ್ಮಶ್ರೀ ನರಸಿಂಹ ತಂತ್ರಿಗಳು ದೀಪ ಬೆಳಗಿ ಉದ್ಘಾಟಿಸಿದರು.
ಸಮಾರಂಭದಲ್ಲಿ ಕರ್ನಾಟಕ ರಾಜ್ಯಅಸಂಘಟಿತ ಪುರೋಹಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕೇಂದ್ರ ಘಟಕದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಡಾಕ್ಟರ್ ವೇ.ಬ್ರ. ಬಿ.ವಿ ಅನಂತಮೂರ್ತಿ, ರಾಜ್ಯ ಘಟಕದ ಖಜಾಂಚಿ ಹಾಗೂ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ವೇ. ಬ್ರ. ಅಭಿಷೇಕ್ ಭಾರದ್ವಾಜ್, ಇತರ ಕೇಂದ್ರೀಯ ಪದಾಧಿಕಾರಿಗಳಾದ ವೇ.ಬ್ರ. ಫಣೀಂದ್ರ ಶರ್ಮಾ, ವೇ.ಬ್ರ ಮಂಡಲಂ ಗೋಪಿನಾಥ್, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಸುದರ್ಶನಾಚಾರ್ಯ, ಸಂಘದ ಕಾನೂನು ಸಲಹೆಗಾರರು ಹಾಗೂ ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ತಿನ ಅಧ್ಯಕ್ಷರಾದ ಕೆ.ವಿ ಸುರೇಶ್ ಕುಮಾರ್, ಇನ್ನೋರ್ವ ಕಾನೂನು ಸಲಹೆಗಾರರಾದ ಹೆಚ್ ವಿ ನಾಗರಾಜ ರಾವ್, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು, ಪದ್ಮರಾಜ ತಂತ್ರಿ, ದೇವಸ್ಥಾನ ಆಡಳಿತ ಸಮಿತಿ ಸದಸ್ಯ , ಜ್ಯೋತಿಷಿ ನಾಗೇಂದ್ರ ಭಾರದ್ವಾಜ್, ನಂದನೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಕರ್ನಾಟಕ ಸಹಕಾರಿ ಸಂಘದ ನಿರ್ದೇಶಕರಾದ ಕೆ. ಪ್ರವೀಣ್ ನಾಯಕ್, ಮನಪಾ ಅಧಿಕಾರಿ ಮಲ್ಲಿಕಾ ಸೇರಿದಂತೆ ಗಣ್ಯರು ಭಾಗವಹಿಸಿದ್ದರು..
ದೇವಸ್ಥಾನದ ಆಡಳಿತ ಅಧಿಕಾರಿ ಅನಂತ ಐತಾಳ್, ದೇವಸ್ಥಾನ ಆಡಳಿತ ಸಮಿತಿಯ ವೆಂಕಟೇಶ ರಾವ್ ಹಾಗೂ ಸಂಘದ ಇತರ ಎಲ್ಲ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು. ರಾಘವೇಂದ್ರ ಉಡುಪ ಅವರು ಕಾರ್ಯಕ್ರಮದ ಯಶಸ್ಸಿಗೆ ವಿಶೇಷ ಸಹಕಾರ ನೀಡಿದ್ದರು. ಶಾಸಕ ಡಾ. ಭರತ್ ಶೆಟ್ಟಿ, ಉಪ ಮೇಯರ್ ಸುಮಂಗಲಾ ರಾವ್ ಅವರು ಭಾಗವಹಿಸಿ ಶುಭ ಸಂದೇಶ ನೀಡಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಪರಿಷತ್ ಕೂಡ ಮಾಡಿದ ಐದು ಆಹಾರ ಧಾನ್ಯದ ಕಿಟ್ ಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಲಾಯಿತು. ಅಲ್ಲದೆ ಸಂಘದ ನೋಂದಾಯಿತ ಸದಸ್ಯರಿಗೂ ಅನ್ನಪೂರ್ಣ ಕಿಟ್ ಒದಗಿಸಲಾಯಿತು. ನೋಂದಾಯಿತ ಸದಸ್ಯರಿಗೆ ಸಂಘದ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.
Key Words: Unorganised workers, ಅಸಂಘಟಿತ ಪುರೋಹಿತ ಕಾರ್ಮಿಕ ಸಂಘ, ದಕ್ಷಿಣ ಕನ್ನಡ
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ