ರಾಜ್ಯದಲ್ಲಿ ಮುಂಗಾರು ಮಳೆಯಬ್ಬರ: ಯೆಲ್ಲೋ ಅಲರ್ಟ್

Upayuktha
0

ಬೆಂಗಳೂರು: ರಾಜ್ಯದ  ಕೆಲವು ಪ್ರದೇಶದಲ್ಲಿ ಜು. 9ರವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ. ಈ ಕಾರಣದಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ನೀಡಿದೆ. 


ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಅಬ್ಬರಿಸಿ ಮರೆಯಾಗಿದ್ದ ವರುಣ ಇದೀಗ ಮತ್ತೆ ಜೋರಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಜು.6ರಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಹೀಗಾಗಿ ಬೆಂಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.  


ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮುಂತಾದ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯ ನೀರಿಕ್ಷೆಯ ಕಾರಣದಿಂದ ಜು.8 ಮತ್ತು 9ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 


ಶ್ರೀಲಂಕಾದ ಕರಾವಳಿ ಭಾಗದ ಸಮುದ್ರದಲ್ಲಿ ಮೇಲ್ಮೈ ಸುಳಿ ಗಾಳಿ ತೀವ್ರಗೊಂಡಿದೆ. ಇದರ ಪರಿಣಾಮದಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಜು.5ರ ನಂತರ ಮಳೆ ಪ್ರಮಾಣದಲ್ಲಿ ಇನ್ನಷ್ಟು ಏರಿಕೆಯಾಗಲಿದೆ.  


ಕಳೆದ 24 ಗಂಟೆಯಲ್ಲಿ ಉತ್ತರ ಒಳನಾಡಿನ ರಾಯಚೂರು ಜಿಲ್ಲೆಯ ಧಡೆಸುಗುರು 5 ಸೆಂ.ಮೀ, ಗದಗದಲ್ಲಿ 4 ಸೆಂ.ಮೀ ಮಳೆ ಸುರಿದಿದೆ. ಕಲಬುರಗಿ (35.1 ಡಿ.ಸೆ) ದಾವಣಗೆರೆ (34 )ವಿಜಯಪುರ (33.5) ಬೀದರ್ (33) ಚಿತ್ರದುರ್ಗ (32.6) ಬೆಂಗಳೂರು ನಗರ ಮತ್ತು ಗ್ರಾಮಾಂತರ (31 ಡಿ.ಸೆ) ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಇಲಾಖೆ ವರದಿ ಮಾಡಿದೆ.


(ಉಪಯುಕ್ತ ನ್ಯೂಸ್)


Visit: Upayuktha Directory- You get here You want


‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top