ಭಾರತ ಮಣ್ಣಿನ ಮಹಾನ್ ಪರ್ವ- ಜನನಿ ಭಾರತಿಯ ಸ್ವಾತಂತ್ರ್ಯೋತ್ಸವ

Upayuktha
0


ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿ ವರ್ಷ ಆಗಸ್ಟ್ 15ಕ್ಕೆ ಆಚರಿಸಲಾಗುತ್ತದೆ. ಬ್ರಿಟೀಷರ ಆಡಳಿತದಿಂದ ಭಾರತ ದೇಶ 1947 ಆಗಸ್ಟ್ 15ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನವೆಂದು ಆಚರಿಸಲಾಗುತ್ತದೆ. ಈ ದಿನವನ್ನು ರಾಷ್ಟ್ರೀಯ ರಜಾ ದಿನವೆಂದು  ಘೋಷಿಸಲಾಗಿದೆ. ದೇಶದಾದ್ಯಂತ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ.


ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ "ಜನ ಗಣ ಮನ"ವನ್ನು ಹಾಡಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಈ ಭಾಷಣದಲ್ಲಿ ದೇಶದ ಸಾಧನೆ, ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ.ಭಾರತದ ರಾಷ್ಟ್ರೀಯ ಧ್ವಜವನ್ನು ದೆಹಲಿಯ ಕೆಂಪು ಕೋಟೆಯಲ್ಲಿ ಹಾರಿಸಲಾಯಿತು; ಸ್ವಾತಂತ್ರ್ಯ ದಿನದಂದು ಸಾರ್ವಜನಿಕ ಮತ್ತು ಖಾಸಗಿ ಕಟ್ಟಡಗಳಲ್ಲಿ ಧ್ವಜಾರೋಹಣ ಸಾಮಾನ್ಯ ದೃಶ್ಯವಾಗಿದೆ.


ಜೂನ್ 3, 1947ರಂದು ಅಂದಿನ ಗವರ್ನರ್ ಜನರಲ್ ಆಗಿದ್ದ ಲಾರ್ಡ್ ಮೌಂಟ್‌ ಬ್ಯಾಟನ್, ಬ್ರಿಟಷ್ ಭಾರತ ಸಾಮ್ರಾಜ್ಯವನ್ನು ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳಾಗಿ ವಿಭಜಿಸುವುದಾಗಿ ಘೋಷಿಸಿದನು. ಇದರ ನಂತರ ಭಾರತದ ಸ್ವಾತ್ರಂತ್ರ್ಯ ಕಾಯಿದೆ 1947 ರ ಅನ್ವಯ ಆಗಸ್ಟ್ 15, 1947 ರಂದು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಘೋಷಿಸಲಾಯಿತು. ಅಂದಿನ ಮಧ್ಯರಾತ್ರಿ, 12:15ರ ನಂತರ  ಜವಾಹರ್‌ಲಾಲ್ ನೆಹರು ಅವರು ದೇಶದ ಪ್ರಥಮ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಂದು ಅವರು ರಾಷ್ಟ್ರವನ್ನುದ್ದೇಶಿಸಿ, ಭಾಷಣ ಮಾಡಿದರು.


ಪ್ರಧಾನಮಂತ್ರಿ ನೆಹರು ಮತ್ತು ಉಪಪ್ರಧಾನಮಂತ್ರಿ ಸರ್ದಾರ್ ವಲ್ಲಭಭಾಯ್ ಪಟೇಲರು ಲಾರ್ಡ್ ಮೌಂಟ್ ಬ್ಯಾಟನ್ನರನ್ನು ಭಾರತದ ಗವರ್ನರ್ ಜನರಲ್ ಆಗಿ ಮುಂದುವರೆಯಲು ಕೋರಿದರು. ಜೂನ್ 1948 ರಲ್ಲಿ ಅವರ ಸ್ಥಾನಕ್ಕೆ ಚಕ್ರವರ್ತಿ ರಾಜಗೋಪಾಲಾಚಾರಿ ಅವರು ಬಂದರು. ಪಟೇಲರು 565 ರಾಜಸಂಸ್ಥಾನಗಳ ಭಾರತದ ರಾಜಕೀಯ ಏಕೀಕರಣ ದ ಜವಾಬ್ದಾರಿಯನ್ನು ವಹಿಸಿಕೊಂಡರು, ಜುನಾಗಢ, ಜಮ್ಮು ಮತ್ತು ಕಾಶ್ಮೀರ, ಮತ್ತು ಹೈದರಾಬಾದ್ ಸಂಸ್ಥಾನ ಗಳನ್ನು ಭಾರತಕ್ಕೆ ಸೇರ್ಪಡೆ ಮಾಡುವಲ್ಲಿ ಸೈನಿಕ ಬಲವನ್ನು ಉಪಯೋಗಿಸಿ "ರೇಷ್ಮೆ ಕೈಗವಸಿನಲ್ಲಿ ಉಕ್ಕಿನ ಮುಷ್ಠಿ" ತಂತ್ರವನ್ನು ಉಪಯೋಗಿಸಿದರು.


ಸಂವಿಧಾನ ರಚನಾಸಭೆಯು ಸಂವಿಧಾನದ ಕರಡು ಸಭೆಯನ್ನು 26 ನವೆಂಬರ್ 1949 ರಂದು ಸಿದ್ಧಗೊಳಿಸುವ ಕಾರ್ಯವನ್ನು ಸಂಪೂರ್ಣಗೊಳಿಸಿತು. 16 ಜನವರಿ 1950 ರಂದು ಭಾರತೀಯ ಗಣರಾಜ್ಯ ವನ್ನು ಅಧಿಕೃತವಾಗಿ ಘೋಷಿಸಲಾಯಿತು. ಸಂವಿಧಾನ ರಚನಾಸಭೆಯು ಡಾ. ರಾಜೇಂದ್ರಪ್ರಸಾದರನ್ನು ದೇಶದ ಪ್ರಥಮ ರಾಷ್ಟ್ರಪತಿ ಯನ್ನಾಗಿ ಚುನಾಯಿಸಿತು. ಅವರು ಗವರ್ನರ್ ಜನರಲ್ ರಾಜಗೋಪಾಲಾಚಾರಿಯವರಿಂದ ಅಧಿಕಾರವನ್ನು ಸ್ವೀಕರಿಸಿದರು. ನಂತರ ಸ್ವತಂತ್ರ ಸಾರ್ವಭೌಮ ಭಾರತವು ಇನ್ನೆರಡು ಪ್ರದೇಶಗಳನ್ನು ತನ್ನಲ್ಲಿ ಸೇರಿಸಿಕೊಂಡಿತು. ಅವು 1961 ರಲ್ಲಿ ಪೋರ್ಚುಗೀಸ್ ನಿಯಂತ್ರಣದಿಂದ ವಿಮೋಚನೆಗೊಳಿಸಿದ ಗೋವಾ ಮತ್ತು ಫ್ರೆಂಚರು 1954ರಲ್ಲಿ ಒಪ್ಪಿಸಿದ ಪಾಂಡಿಚೇರಿ. 1952ರಲ್ಲಿ ಭಾರತವು ತನ್ನ ಮೊದಲ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಿತು. ಶೇ. 62 ಕ್ಕೂ ಹೆಚ್ಚು ಮತದಾರರು ಅದರಲ್ಲಿ ಭಾಗವಹಿಸಿದರು. ಅದರಿಂದಾಗಿ ಭಾರತವು ವಾಸ್ತವದಲ್ಲಿ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವವಾಯಿತು.


ಇಂದು ಅಂದರೆ 15.08.2-21 ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ಈ ಸುಸಂದರ್ಭದಲ್ಲಿ ಸರ್ವರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.


-ಶ್ರವಣ್ ಕಾರಂತ್ ಕೆ

ಸುಪ್ರಭಾತ

ಶಕ್ತಿನಗರ ಮಂಗಳೂರು.

+91 8971275651


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top