ಶಿರಸಿ: ಕೃಷಿ ವಿಶ್ವವಿದ್ಯಾಲಯ ಧಾರವಾಡ, ಶಿರಸಿಯ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಉತ್ತರ ಕನ್ನಡ ಸಾವಯವ ಒಕ್ಕೂಟ, ತೋಟಗಾರಿಕಾ ಇಲಾಖೆ ಶಿರಸಿ ಮತ್ತು ಕೃಷಿ ಇಲಾಖೆ ಇವರ ಸಹಯೋಗದಲ್ಲಿ ಬಾಳೆಕಾಯಿ ಹುಡಿ ಖಾದ್ಯ ವೈವಿಧ್ಯ ಸ್ಪರ್ಧೆ, ಪ್ರದರ್ಶನ ಹಾಗೂ ಮೌಲ್ಯವರ್ಧನೆ ಕುರಿತು ಮಾಹಿತಿ ಕಾರ್ಯಾಗಾರ ಆ.11ರಂದು ಆಯೋಜಿಸಲಾಗಿದೆ.
ಶಿರಸಿಯ ಎಪಿಎಂಸಿ ಯಾರ್ಡ್‌ನಲ್ಲಿರುವ ಟಿಆರ್‌ಸಿ ಬ್ಯಾಂಕ್ ಸಭಾಭವನದಲ್ಲಿ ಬೆಳಗ್ಗೆ 10:30ರಿಂದ ಈ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರಿನ ಕೃಷಿ ತಂತ್ರಜ್ಞಾನ ಅನ್ವಯಿಕ ಸಂಶೋಧನಾ ಸಂಸ್ಥೆ, ಐಸಿಎಆರ್ ನಿರ್ದೇಶಕ ಡಾ. ವಿ. ವೆಂಕಟಸುಬ್ರಮಣಿಯನ್ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಧಾರವಾಡ ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ ರಮೇಶ್ ಬಾಬು ಅಧ್ಯಕ್ಷತೆವಹಿಸಲಿದ್ದಾರೆ.
ಪ್ರದರ್ಶನವನ್ನು ಶಿರಸಿಯ ಸಹಾಯಕ ಆಯುಕ್ತರಾದ ಶ್ರೀಮತಿ ಆಕೃತಿ ಬನ್ಸಾಲ್ ಉದ್ಘಾಟಿಸುತ್ತಾರೆ.
ಮುಖ್ಯ ಅತಿಥಿಗಳಾಗಿ- ಕಾರವಾರದ ಜಂಟಿ ಕೃಷಿ ನಿರ್ದೇಶಲ ಡಾ. ಹೊನ್ನಪ್ಪ ಗೌಡ, ಧಾರವಾಡ ಕೃಷಿ ವಿವಿಯ ಸಹ ವಿಸ್ತರಣಾ ನಿರ್ದೇಶಕ ಡಾ. ಪಿಎಸ್ ಹೂಗಾರ, ಶಿರಸಿ ತೋಟಗಾರಿಕೆ ಉಪನಿರ್ದೇಶಕ ಡಾ ಸತೀಶ್ ಬಿ.ಪಿ, ಕೃಷಿ ವಿಜ್ಞಾನ ಕೇಂದ್ರದ ನೋಡಲ್ ಅಧಿಕಾರಿ ಡಾ ಶ್ರೀಪಾದ ಕುಲಕರ್ಣಿ, ಶಿರಸಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸತೀಶ್ ಹೆಗಡೆ, ಶಿರಸಿ ಸಾವಯವ ಒಕ್ಕೂಟದ ಅಧ್ಯಕ್ಷ ವಿಶ್ವೇಶ್ವರ ಭಟ್, ಉಪಾಧ್ಯಕ್ಷರಾದ ವೆಂಕಟೇಶ್ ನಾಯ್ಡು ಭಾಗವಹಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಚಲನಚಿತ್ರ ಹಾಗೂ ಕಿರುತೆರೆ ನಟ, ಬೊಂಬಾಟ್ ಭೋಜನ ಖ್ಯಾತಿ ಸಿಹಿ-ಕಹಿ ಚಂದ್ರು ಅವರು ಪಾಲ್ಗೊಳ್ಳಲಿದ್ದಾರೆ. ಶಿರಸಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಮಂಜು ಎಂ.ಜೆ ಅವರು ಈ ಮಾಹಿತಿ ನೀಡಿದ್ದಾರೆ.
(ಕೃತಜ್ಞತೆಗಳು: ಶ್ರೀಪಡ್ರೆ, ಅಡಿಕೆ ಪತ್ರಿಕೆ ಸಂಪಾದಕರು)
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ