||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನಾಡಿದ್ದು (ಆ.29) ರಾಮಾಶ್ರಮದಲ್ಲಿ ರಕ್ತದಾನ ಶಿಬಿರ

ನಾಡಿದ್ದು (ಆ.29) ರಾಮಾಶ್ರಮದಲ್ಲಿ ರಕ್ತದಾನ ಶಿಬಿರ

 ಬೆಂಗಳೂರು/ ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿಯವರ ವಿಶ್ವವಿದ್ಯಾ ಚಾತುರ್ಮಾಸ್ಯ ಅಂಗವಾಗಿ ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಈ ತಿಂಗಳ 29ರಂದು ಬೆಂಗಳೂರಿನ ಗಿರಿನಗರ ಶ್ರೀರಾಮಾಶ್ರಮದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.


ಸಾಮಾಜಿಕ ಜಾಲತಾಣ ಬಳಗ ಮತ್ತು ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಈ ಶಿಬಿರ ವ್ಯವಸ್ಥೆಗೊಳಿಸಲಾಗಿದ್ದು, ಎಲ್ಲ ಕೋವಿಡ್ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ರಕ್ತದಾನ ಶಿಬಿರ ನಡೆಸಲಾಗುತ್ತಿದೆ ಎಂದು ಸಂಘಟಕ ಶಿಶಿರ ಹೆಗಡೆ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಭಾನುವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರ ವರೆಗೆ ಶಿಬಿರ ವ್ಯವಸ್ಥೆಗೊಳಿಸಲಾಗಿದ್ದು, ರಕ್ತದಾನಿಗಳು ಮುಂಚಿತವಾಗಿ ಹೆಸರು ನೊಂದಾಯಿಸಿಕೊಳ್ಳಬೇಕು. ವಿವರಗಳಿಗೆ: 8105892100 ಸಂಪರ್ಕಿಸಬಹುದು.


ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಎಲ್ಲೆಡೆ ರಕ್ತ ಬ್ಯಾಂಕ್‍ಗಳಲ್ಲಿ ರಕ್ತದ ಕೊರತೆ ಎದುರಾಗಿದ್ದು, ಜ್ವಲಂತ ಸಮಸ್ಯೆಗೆ ಸ್ಪಂದಿಸುವ ಉದ್ದೇಶದಿಂದ ಈ ರಚನಾತ್ಮಕ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾರತದ ಪಾರಂಪರಿಕ ವಿದ್ಯೆ ಮತ್ತು ಆಧುನಿಕ ವಿದ್ಯೆಗಳನ್ನು ಸಮಗ್ರವಾಗಿ ಬೋಧಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಹಮ್ಮಿಕೊಂಡಿರುವ ಸಮಾಜಮುಖಿ ಹಾಗೂ ಮಾನವೀಯ ಕಾರ್ಯಗಳಲ್ಲಿ ಇದೂ ಒಂದಾಗಿದೆ. ವಿವಿವಿ ಸಿಬ್ಬಂದಿ, ಶ್ರೀಮಠದ ಕಾರ್ಯಕರ್ತರು, ಸಾಮಾಜಿಕ ಜಾಲತಾಣ ಬಳಗದ ಸದಸ್ಯರು ರಕ್ತದಾನ ಮಾಡಲಿದ್ದಾರೆ ಎಂದು ಪ್ರಕಟಣೆ ಹೇಳಿದೆ.


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post