ಬೆಂಗಳೂರು: ಕೋವಿಡ್-19 ಹರಡುವುದನ್ನು ತಡೆಗಟ್ಟುವುದಕ್ಕಾಗಿ ಕರ್ನಾಟಕದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಕೋವಿಡ್ ಸ್ಥಿತಿಗತಿ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕೋವಿಡ್ ಟಾಸ್ಕ್ ಫೋಸ್ ಮತ್ತು ವಿವಿಧ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಈ ಬಗ್ಗೆ ಮಾಹಿತಿ ನೀಡಿದರು.
ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗುವುದು. ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಅವಧಿ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ಜಾರಿಯಾಗಲಿದೆ ಎಂದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ