ಮಂಗಳೂರು: ಕೋವಿಡ್ ಪ್ರಕರಣ ಮತ್ತೆ ಏರಿಕೆ- ವಿವಿಯ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆ

Upayuktha
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ತರಗತಿಗಳ ಎಲ್ಲ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.


ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕಾಸರಗೋಡು ಜಿಲ್ಲೆಯಿಂದ ಆಗಮಿಸುತ್ತಿದ್ದು, ನೆರೆಯ ರಾಜ್ಯ ಹಾಗೂ ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ, ಸಂಭಾವ್ಯ ಅಪಾಯವನ್ನು ತಪ್ಪಿಸಲು ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದಿಂದ ಕೆಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೊರಡಿಸಲಾಗಿದೆ. ಇದರಿಂದಾಗಿ ಅಂತರ್ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವಿದ್ಯಾಭ್ಯಾಸಕ್ಕಾಗಿ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಕೂಡಾ ಅನಾನುಕೂಲವಾಗುವ ಸಾಧ್ಯತೆ ಇರುತ್ತದೆ.


ಪ್ರಸ್ತುತ ಸನ್ನಿವೇಶವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಹಾಗೂ ಯಾವುದೇ ವಿನಾಯಿತಿಯನ್ನು ನೀಡಲು ಅವಕಾವಿಲ್ಲದಿರುವುದರಿಂದ, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಮುಂದಿನ ಆದೇಶದವರೆಗೆ ತರಗತಿ ಹಾಗೂ ಪರೀಕ್ಷೆಗಳನ್ನು ಮುಂದೂಡುವಂತೆ ಸೂಚಿಸಿದೆ ಹಾಗೂ ಕೈಗೊಂಡ ಕ್ರಮದ ಬಗ್ಗೆ ಈ ಕಛೇರಿಗೆ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top