ಡಾ. ಎಸ್‌. ಆರ್‌ ರಂಗನಾಥನ್‌ ಈಗಲೂ ಪ್ರಸ್ತುತ: ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ

Upayuktha
0


ಮಂಗಳೂರು: ಭಾರತೀಯ ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ. ಶಿಯಾಲಿ ರಾಮಾಮೃತ ರಂಗನಾಥನ್‌ (1892-1972) ಅವರ ಸ್ಮರಣಾರ್ಥ ಆಚರಿಸಲಾಗುವ 'ರಾಷ್ಟ್ರೀಯ ಗ್ರಂಥಪಾಲಕರ ದಿನʼವನ್ನು ಗುರುವಾರ ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಸರಳವಾಗಿ ಆಚರಿಸಲಾಯಿತು.


ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೂಲತಃ ಗಣಿತಜ್ಞರಾದ ಡಾ. ಎಸ್‌. ಆರ್‌ ರಂಗನಾಥನ್‌, ಬನಾರಸ್‌ ಹಿಂದೂ ವಿಶ್ವವಿದ್ಯಾನಿಲಯ (1945–47), ದೆಹಲಿ ವಿಶ್ವವಿದ್ಯಾನಿಲಯ(1947–55) ಯಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಭಾರತೀಯ ಗ್ರಂಥಾಲಯ ಒಕ್ಕೂಟದ ಅಧ್ಯಕ್ಷರಾಗಿ 1944 ರಿಂದ 1953 ರವರೆಗೆ ಸೇವೆ ಸಲ್ಲಿಸಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಾಕಷ್ಟು ಹೆಸರು ಮಾಡಿರುವುದು ಹೆಮ್ಮೆಯ ಸಂಗತಿ. ಅವರ ʼಗ್ರಂಥಾಲಯ ವಿಜ್ಞಾನದ ಐದು ನಿಯಮಗಳುʼ ಪುಸ್ತಕ ಈಗಲೂ ಪ್ರಸ್ತುತ ಎಂದರು.


ಗ್ರಂಥಪಾಲಕ ಡಾ. ಪುರುಷೋತ್ತಮ ಗೌಡ ಎಂ ಅತಿಥಿಗಳನ್ನು ಸ್ವಾಗತಿಸಿ, ಡಾ. ಎಸ್‌. ಆರ್‌ ರಂಗನಾಥನ್‌ರ ಕೊಡುಗೆಗಾಗಿ ಅವರ ಜನ್ಮದಿನವನ್ನು ʼರಾಷ್ಟ್ರೀಯ ಗ್ರಂಥಪಾಲಕರ ದಿನʼವಾಗಿ ಆಚರಿಸಲಾಗುತ್ತದೆ, ಎಂದರು.


ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯ ಗ್ರಂಥಾಲಯದ ಸಿಬ್ಬಂದಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.  


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top