ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ, ಮೆರವಣಿಗೆ

Upayuktha
0

ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿಪಡಿಸಿದ ಮತಾಂಧರ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಲು ಆಗ್ರಹ



ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸಂದರ್ಭ ಕಬಕದಲ್ಲಿ ಮತಾಂಧರು ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿ ಧಿಕ್ಕಾರ ಕೂಗಿದ ಘಟನೆಯನ್ನು ಪ್ರತಿಭಟಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಇಂದು ಕಬಕ ಚಲೋ ಮೆರವಣಿಗೆ ನಡೆಸಿದರು.


ದುಷ್ಕರ್ಮಿಗಳ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಿ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದ್ದಾರೆ. ಹಿಮದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.


ಆಗಸ್ಟ್ 15ರಂದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕಬಕ ಗ್ರಾಮ ಪಂಚಾಯತ್ ವತಿಯಿಂದ ಜನಜಾಗೃತಿ ಗ್ರಾಮ ಸ್ವರಾಜ್ಯ ರಥಯಾತ್ರೆ ಆಯೋಜಿಸಲಾಗಿತ್ತು. ಈ ರಥದಲ್ಲಿ ಭಾರತಮಾತೆಯ ಭಾವಚಿತ್ರದ ಜತೆಗೆ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರರ ಭಾವಚಿತ್ರವನ್ನೂ ಇರಿಸಲಾಗಿತ್ತು. ಇದರಿಂದ ಕೆರಳಿದ ಕೆಲವು ಮತಾಂಧರು ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿ, ಧಿಕ್ಕಾರ ಕೂಗಿ ಗದ್ದಲವೆಬ್ಬಿಸಿದ್ದರು.


ಬಳಿಕ ಪೊಲೀಸರು ಲಾಠಿ ಪ್ರಹಾರ ನಡೆಸಿ ದುಷ್ಕರ್ಮಿಗಳನ್ನು ಚದುರಿಸಿದ್ದರು. ಅನಂತರ ಕೇಸು ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಇನ್ನೂ ಹಲವರು ತಲೆಮರೆಸಿಕೊಂಡಿದ್ದು, ಅವರನ್ನೂ ಕೂಡಲೇ ಬಂಧಿಸಬೇಕೆಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ.


ಬಜರಂಗದಳ ದಕ್ಷಿಣ ಪ್ರಾಂತ ವಿಭಾಗ ಸಂಚಾಲಕ ಮುರಳಿಕೃಷ್ಣ ಹಸಂತಡ್ಕ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಮಾತೃಸುರಕ್ಷಾ ಪ್ರಮುಖ ಗಣರಾಜ ಭಟ್ ಕೆದಿಲ, ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್‌ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.




(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top