ಉಜಿರೆ: ರಾಜ್ಯದ ವಿಧಾನ ಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ಧರ್ಮಸ್ಥಳದಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಭಾಪತಿಯವರನ್ನು ಗೌರವಿಸಿದರು. ಬಳಿಕ ಸಭಾಪತಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಳ ಕಚೇರಿ ಪ್ರಬಂಧಕ ಪಾರ್ಶ್ವನಾಥ್ ಜೈನ್ ಸಹಕರಿಸಿದರು.
ಗುರುವಾರ ರಾತ್ರಿ ಧರ್ಮಸ್ಥಳಕ್ಕೆ ಬಂದ ಅವರು ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದರು. ಹೆಗ್ಗಡೆಯವರ ಬೀಡಿನಲ್ಲಿ (ನಿವಾಸ) ಸಭಾಪತಿ ಅವರನ್ನು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಸ್ವಾಗತಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ