ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ: ಒಂದೇ ನಂಬರ್‌ ಬಳಸಿ ಸಂಚರಿಸುತ್ತಿದ್ದ ಬಸ್‌ಗಳ ವಶ

Upayuktha
0


ಬೆಂಗಳೂರು: ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದು ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಒಂದೇ ನಂಬರ್‌ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ.


ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್‌, ಜಂಟಿ ಆಯುಕ್ತೆ ಓಂಕಾರೇಶ್ವರಿ ನೇತೃತ್ವದಲ್ಲಿ ಕೋಲಾರ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕರಾದ ತಿಪ್ಪೇಸ್ವಾಮಿ ಸಿ, ಸುರೇಶ್‌ ಜಿಎನ್‌, ಸುಧೀರ್‌ ಬಾಬು ಟಿ ಅವರ ತಂಡ ಈ ಕಾರ್ಯಾಚರಣೆ ನಡೆಸಿದೆ.


ಸುಮಾರು 10 ಲಕ್ಷ ತೆರಿಗೆ ವಂಚಿಸಿ ಒಂದೇ ನಂಬರ್‌ ಬಳಸಿಕೊಂಡು (KA 06 4815- 2 ಬಸ್‌ ಗಳು) (KL 05 Q 2140 2 ಬಸ್‌ ಗಳು) ಹಾಗೂ ಕರ್ನಾಟಕ ರಾಜ್ಯಕ್ಕೆ ನೀಡಬೇಕಾದ ತೆರಿಗೆಯನ್ನು ನೀಡದೆ, ನಕಲಿ ನಂಬರ್‌ ಪ್ಲೇಟ್‌ ಗಳ ನ್ನು ಅಳವಡಿಸಿಕೊಂಡು ಸಂಚರಿಸುತ್ತಿದ್ದ ನಾಲ್ಕು ಬಸ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ.


ಈ ಸಂಬಂಧ ದೂರನ್ನು ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top