ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆ.23ರಂದು ಸೋಮವಾರ ನಡೆಯಲಿದೆ.
ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಸಾಂಸ್ಕೃತಿಕ ವಸ್ತು ಸಂಗ್ರಹಾಲಯದ ಮೊದಲ ಮಹಡಿಯಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ಸಭಾಂಗಣದಲ್ಲಿ ಬೆಳಗ್ಗೆ 10:00ಕ್ಕೆ ಈ ಕಾರ್ಯಕ್ರಮ ಆರಂಭವಾಗಲಿದೆ ಎಂದು ಕುಲಸಚಿವ ಡಾ. ಕಿಶೋರ್ ಸಿ.ಕೆ ಮತ್ತು ಪೀಠದ ಸಂಯೋಜಕರಾದ ಡಾ. ಗಣೇಶ್ ಅಮೀನ್ ಸಂಕಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆವಹಿಸಲಿದ್ದಾರೆ. ಹಿರಿಯ ಸಾಹಿತಿ ಮತ್ತು ವಿದ್ವಾಂಸರಾದ ಮುದ್ದು ಮೂಡುಬೆಳ್ಳೆ ಅವರು 'ನಾರಾಯಣಗುರುಗಳ ಅಧ್ಯಾತ್ಮ ತತ್ತ್ವ' ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರಿನ ನ್ಯಾಯವಾದಿ ಎಂ.ಪಿ. ನೋರೊನ್ಹಾ, ಕಾಟಿಪಳ್ಳದ ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ದಯಾಕರ್ ಕುಳಾಯಿ, ಕೊಣಾಜೆಯ ಬ್ರಹ್ಮಶ್ರೀ ನಾರಾಯಣಗುರು ಸಮಾಜಸೇವಾ ಸಂಘದ ಅಧ್ಯಕ್ಷ ಚಂದ್ರಹಾಸ ಅಮೀನ್ ಖಂಡಿಗ ಅವರು ಭಾಗವಹಿಸಲಿದ್ದಾರೆ.
ಕೋವಿಡ್ ನಿಯಮದ ಅನುಸಾರ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರು ವಿವಿಯ ಫೇಸ್‌ಬುಕ್ ಪುಟ- https://www.facebook.com/university.mangalore ಹಾಗೂ https://youtu.be/rQRJ3ZeKDE ನಲ್ಲಿ ಪ್ರಸಾರವಾಗಲಿದೆ.