ಕಲ್ಯಾಣ್ ಸಿಂಗ್ ನಿಧನಕ್ಕೆ ಪೇಜಾವರ ಶ್ರೀ ತೀವ್ರ ಸಂತಾಪ

Upayuktha
0


ಉಡುಪಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನಕ್ಕೆ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಮಾಧ್ಯಮಕ್ಕೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು- 

ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಆಂದೋಲನದಲ್ಲಿ ಸದಾ ಸ್ಮರಣೀಯ ಪಾತ್ರ ವಹಿಸಿದ್ದ ಹಿರಿಯ ಮುತ್ಸದ್ದಿ ಕಲ್ಯಾಣ್ ಸಿಂಗ್ ಜೀ ಯವರ ನಿಧನದಿಂದ ತೀವ್ರ ವಿಷಾದವಾಗಿದೆ. ಹಿಂದೂ ಸಿದ್ಧಾಂತಕ್ಕೆ ಬದ್ಧರಾಗಿದ್ದ ಅವರು ನಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರೊಂದಿಗೂ ವಿಶೇಷ ಆತ್ಮೀಯ ಬಾಂಧವ್ಯ ಹೊಂದಿದ್ದರು. ಅವರ ಆತ್ಮಕ್ಕೆ ನಮ್ಮ ಆರಾಧ್ಯಮೂರ್ತಿಯೂ ಆಗಿರುವ ಅಯೋಧ್ಯಾಪತಿ ಶ್ರೀ ರಾಮಚಂದ್ರ ದೇವರು ಸದ್ಗತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇವೆ- ಎಂದು ತಿಳಿಸಿದ್ದಾರೆ.


ಪೇಜಾವರ ಶ್ರೀಗಳು ಅಯೋಧ್ಯಾ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ (ರಿ) ನ ವಿಶ್ವಸ್ಥರೂ ಆಗಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top