ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗೃಹರಕ್ಷಕರ ಮಕ್ಕಳಿಗೆ ಸ್ಪರ್ಧೆ

Upayuktha
0


ಮಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಗೃಹರಕ್ಷಕ ದಳದ ಸದಸ್ಯರ ಮಕ್ಕಳಿಗೆ ದೇಶ ಭಕ್ತಿ ಕುರಿತ ಹಾಡು ಮತ್ತು ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ಭಾಷಣ ಸ್ಪರ್ಧೆಗಳನ್ನು ದಿನಾಂಕ: 15-08-2021 ಭಾನುವಾರದಂದು ಬೆಳಿಗ್ಗೆ 10.00 ಗಂಟೆಯಿಂದ 12.00 ಗಂಟೆಯ ವರೆಗೆ ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.


ಸ್ಪರ್ಧೆಂಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ, ದ್ವಿತೀಯ ಬಹುಮಾನ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಜಿಲ್ಲೆಯ ಎಲ್ಲಾ ಗೃಹರಕ್ಷಕರ ಮತ್ತು ಗೃಹರಕ್ಷಕಿಯರ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆ ಚೀಫ್‍ ವಾರ್ಡನ್ ಡಾ|| ಮುರಲೀ ಮೋಹನ್ ಚೂಂತಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top