ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Upayuktha
0

ಮಂಗಳೂರು: 2021-22ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.


ಒಬ್ಬ ಅರ್ಜಿದಾರರು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿ ಮಾತ್ರ ಸಲ್ಲಿಸಬೇಕು.

ಚಟುವಟಿಕೆಗಳ ವಿವರ ಇಂತಿದೆ: 

ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ.


ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಯ ಜೆರಾಕ್ಸ್ ಪ್ರತಿ, ಫೋಟೋಗ್ರಾಫರ್, ಸಿ.ಡಿ, ಖರ್ಚು ವೆಚ್ಚ, ಪತ್ರಿಕಾ ಪ್ರಕಟಣೆಗಳ ಮಾಹಿತಿಗಳ ದಾಖಲೆಗಳನ್ನು ಲಗತ್ತಿಸಬೇಕು.


ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮಂಗಳೂರು ತಾಲೂಕಿನ ಉಪ ಕೃಷಿ ನಿರ್ದೇಶಕರ ಕಚೇರಿ ಹಾಗೂ ಮಂಗಳೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top