ಸುರೇಶ ಶೆಟ್ಟಿ– 80: ಬಪ್ಪಳಿಗೆಯಲ್ಲಿ ‘ಅಶೀತಿ ಪ್ರಣತಿ’ ಕಾರ್ಯಕ್ರಮ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ, ಆದರ್ಶ ಶಿಕ್ಷಕರಾಗಿ ಗುರುತಿಸಿಕೊಂಡು ಅಸಂಖ್ಯ ವಿದ್ಯಾರ್ಥಿಗಳಿಗೆ ಬದುಕಿನ ಹಾದಿ ತೋರಿಸಿರುವ ವಿಶ್ರಾಂತ ಶಿಕ್ಷಕ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ. ಸುರೇಶ ಶೆಟ್ಟಿ ಅವರ 80ನೇ ವರ್ಷಾಚರಣೆಯ ಪ್ರಯುಕ್ತ ‘ಅಶೀತಿ ಪ್ರಣತಿ’ ಎಂಬ ಅಭಿವಂದನಾ ಕಾರ್ಯಕ್ರಮ ಅಕ್ಟೋಬರ್ 2ರಂದು ಬಪ್ಪಳಿಗೆಯ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ನಡೆಯಲಿದೆ. 


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರಿನ ಶಾಸಕ ಸಂಜೀವ ಮಠಂದೂರು, ಮಾಜಿ ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭಾಗವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top