ವಿಶ್ವವಿದ್ಯಾನಿಲಯ ಕಾಲೇಜು ಅಭಿವೃದ್ಧಿ ಮಂಡಳಿ (ಸಿಡಿಸಿ) ಸಭೆಯಲ್ಲಿ ಶಾಸಕರ ಭರವಸೆ
ಮಂಗಳೂರು: 150 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಅಭಿವೃದ್ಧಿಗೆ ಸರಕಾರದಿಂದ ವಿಶೇಷ ಅನುದಾನ ದೊರಕಿಸಲು ಪ್ರಯತ್ನಿಸಲಾಗುವುದು, ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಭರವಸೆ ನೀಡಿದ್ದಾರೆ.
ಶನಿವಾರ ಕಾಲೇಜಿನಲ್ಲಿ ನಡೆದ, ಕಾಲೇಜು ಅಭಿವೃದ್ಧಿ ಮಂಡಳಿ (ಸಿಡಿಸಿ) ಸಭೆಯಲ್ಲಿ ಮಾತನಾಡಿದ ಶಾಸಕರು, ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 70,000 ಕ್ಕೂ ಹೆಚ್ಚು ಪುಸ್ತಕಗಳಿರುವ ಕಾಲೇಜಿನ ಗ್ರಂಥಾಲಯವನ್ನು ಪುನರ್ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ವಿಶ್ವವಿದ್ಯಾನಿಲಯ ಕಾಲೇಜಿನ ಅಭಿವೃದ್ಧಿ, ಮೂಲಸೌಕರ್ಯ ಹಾಗೂ ಹೊಸ ಕೋರ್ಸ್ಗಳನ್ನು ಜಾರಿಗೊಳಿಸುವ ಕುರಿತಾಗಿ ಚರ್ಚೆ ನಡೆಸಲಾಯಿತು. ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರೂ ಕಾಲೇಜಿನ ಅಭಿವೃದ್ಧಿಗೆ ಕೈಜೋಡಿಸುವ ಭರವಸೆ ನೀಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ರಮೇಶ್, ರವಿಚಂದ್ರ ಪಿ ಎನ್, ಸಿಡಿಸಿ ಸದಸ್ಯರುಗಳಾದ ಮುರಳೀಧರ ನಾಯಕ್, ಶಿಕಾರಿಪುರ ಕೃಷ್ಣಮೂರ್ತಿ, ಪ್ರಕಾಶ್ ನಾಯಕ್, ಹರ್ಷವರ್ಧನ ಗಟ್ಟಿ, ವಿಠಲ ಕುಡುವ ಮೊದಲಾದವರು ಉಪಸ್ಥಿತರಿದ್ದರು. ಪ್ರಾಂಶುಪಾಲೆ ಡಾ. ಅನಸೂಯ ರೈ ಅಧ್ಯಕ್ಷತೆ ವಹಿಸಿದ್ದರು. ಪ್ರಭಾರ ಪ್ರಾಂಶುಪಾಲ ಡಾ. ಹರೀಶ್ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ ಸ್ನಾತಕೋತ್ತರ ಅರ್ಥಶಾಸ್ತ್ರ ಸಂಯೋಜಕ ಡಾ. ಜಯವಂತ ನಾಯಕ್ ಧನ್ಯವಾದ ಸಮರ್ಪಿಸಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ