ಧರ್ಮಸ್ಥಳದಲ್ಲಿ 2011ರ ನವೆಂಬರ್ 29 ರಂದು 36ನೇ ರಾಷ್ಟ್ರೀಯ ಯೋಗಾಸನಾ ಸ್ಪರ್ಧೆಯ ಸಂದರ್ಭದಲ್ಲಿ ಆಸ್ಕರ್ ಫೆರ್ನಾಂಡಿಸ್‍ರಿಂದ ಯೋಗಾಭ್ಯಾಸ ಪ್ರದರ್ಶನ
ಧರ್ಮಸ್ಥಳ: ರಾಜ್ಯಸಭೆ ಸದಸ್ಯ, ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ನಿಧನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಕ್ಕೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು, ಜಿಲ್ಲೆಯ ಅಭಿವೃದ್ಧಿಗೆ ಆಸ್ಕರ್ ಫರ್ನಾಂಡಿಸ್ ಅವರ ಕೊಡುಗೆಗಳನ್ನು, ಸಾಧನೆಗಳನ್ನು ಸ್ಮರಿಸಿಕೊಂಡಿದ್ದಾರೆ.
ಅವರ ಸಂದೇಶದ ಪೂರ್ಣಪಾಠ ಇಲ್ಲಿದೆ:
ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.
ಆಸ್ಕರ್ ಫೆರ್ನಾಂಡಿಸ್ ನಮ್ಮ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಪುತ್ರ. ಸರಳ, ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಅವಿಶ್ರಾಂತ ದುಡಿಮೆಗೆ ಇನ್ನೊಂದು ಹೆಸರು ಆಸ್ಕರ್ ಫೆರ್ನಾಂಡಿಸ್.
ನಮ್ಮ ಜಿಲ್ಲೆಯ ಅನೇಕ ಪ್ರಗತಿಪರ ಕಾರ್ಯಗಳಿಗೆ ಅವರು ಸರ್ಕಾರದಿಂದ ಯೋಜನೆಗಳನ್ನು ಮಂಜೂರು ಮಾಡಿಸಿ ಪ್ರಗತಿಗೆ ಕಾರಣರಾಗಿದ್ದಾರೆ.
ಯೋಗ ಮತ್ತು ಪ್ರಕೃತಿ ಚಿಕಿತ್ಸೆಯನ್ನು ವೈಯಕ್ತಿಕವಾಗಿ ಅಭ್ಯಾಸ ಮಾಡಿ, ತಮ್ಮ ಜೀವನದದಲ್ಲಿ ಅಳವಡಿಸಿಕೊಂಡಿರುವುದಲ್ಲದೆ ತಮ್ಮ ಪತ್ನಿಯನ್ನೂ ಪ್ರಕೃತಿ ಚಿಕಿತ್ಸೆಗಾಗಿ ಧರ್ಮಸ್ಥಳದ ಶಾಂತಿವನಕ್ಕೆ ಕಳುಹಿಸಿಕೊಡುತ್ತಿದ್ದರು. ಲೋಕಸಭೆಯಲ್ಲಿಯೂ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಮಹತ್ವ ಮತ್ತು ಪ್ರಸ್ತುತತೆ ಬಗ್ಯೆ ಪ್ರತಿಪಾದಿಸಿದ್ದರು.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ.
-ಡಿ. ವೀರೇಂದ್ರ ಹೆಗ್ಗಡೆಯವರು
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ