||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಕ್ಟೋಬರ್ 1 ರಿಂದ 7 ರ ತನಕ ಭಜನಾ ತರಬೇತಿ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಕ್ಟೋಬರ್ 1 ರಿಂದ 7 ರ ತನಕ ಭಜನಾ ತರಬೇತಿ ಕಮ್ಮಟ


ಭಜನಾ ಕಮ್ಮಟ- ಫೈಲ್ ಫೋಟೋ


ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 23ನೇ ವರ್ಷದ ಭಜನಾ ತರಬೇತಿ ಕಮ್ಮಟವನ್ನು ಅಕ್ಟೋಬರ್ 01 ರಿಂದ 07 ರವರೆಗೆ ಸಂಯೋಜಿಸಲಾಗಿದೆ ಎಂದು ಭಜನಾ ಸಮಿತಿಯ ಕಾರ್ಯದರ್ಶಿ ಶ್ರೀಮತಿ ಮಮತಾರಾವ್ ತಿಳಿಸಿದ್ದಾರೆ.


ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳ ಆಯ್ದ ಭಜನಾ ಮಂಡಳಿಗಳ 200 ಮಂದಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ಪಡೆಯಲು ಅವಕಾಶವಿದ್ದು, ಇವರಿಗೆ ಭಜನಾ ಪರಿಣಿತರಿಂದ ವಿಶೇಷ ತರಬೇತಿಯನ್ನು ನೀಡಲಾಗುವುದು. ಕಮ್ಮಟದಲ್ಲಿ ದಾಸ ಸಾಹಿತ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಿ ಅದನ್ನು ಭಜನಾ ರೂಪದಲ್ಲಿ ಹೇಳಿಕೊಡಲಾಗುತ್ತದೆ.


ಅಲ್ಲದೇ ಪ್ರಾರ್ಥನಾ ಹಾಡುಗಳು, ವಚನ ಸಾಹಿತ್ಯಗಳ ತರಬೇತಿ ನೀಡಲಾಗುತ್ತದೆ. ಮಹಿಳಾ ಶಿಬಿರಾರ್ಥಿಗಳಿಗೆ ಶೋಭಾನೆ ಹಾಡುಗಳನ್ನು ಹೇಳಿಕೊಡಲಾಗುತ್ತದೆ. ನೃತ್ಯ ಭಜನಾ ಪರಿಣಿತರಿಂದ ನೃತ್ಯ ಭಜನೆ ಹೇಳಿಕೊಡಲಾಗುತ್ತದೆ. ಯೋಗಾಭ್ಯಾಸ, ಧ್ಯಾನಗಳ ತರಗತಿಗಳನ್ನು ವ್ಯವಸ್ಥೆಗೊಳಿಸಲಾಗುತ್ತದೆ. ವಿವಿಧ ವಿಷಯ ತಜ್ಞರಿಂದ ಒಂದು ಗಂಟೆಯ ಕಾಲ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತದೆ. 


ಅರ್ಹತೆ:- ತರಬೇತಿಯಲ್ಲಿ ಭಜನಾ ಮಂಡಳಿಯ ಸದಸ್ಯರು ಮಾತ್ರ ಭಾಗವಹಿಸಲು ಅವಕಾಶವಿದೆ. ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ ಓದಲು, ಬರೆಯಲು ತಿಳಿದಿರಬೇಕು. 18 ರಿಂದ 50 ವರ್ಷ ವಯಸ್ಸಿನವರಾಗಿರಬೇಕು. ಕನಿಷ್ಠ ರಾಗ, ತಾಳ, ಜ್ಞಾನ ಹೊಂದಿರಬೇಕು ಮತ್ತು ಒಂದು ಮಂಡಳಿಯಿಂದ 2 ಸದಸ್ಯರಿಗೆ ಭಾಗವಹಿಸಲು ಅವಕಾಶವಿದೆ. ತರಬೇತಿ ಕಮ್ಮಟದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಸಿದ್ಧ ಕಲಾವಿದರು ಭಾಗವಹಿಸಲಿದ್ದಾರೆ.


ನೋಂದಾವಣೆ ಮಾಡಲು ಇಚ್ಚಿಸುವವರು ಮತ್ತು ಹೆಚ್ಚಿನ ಮಾಹಿತಿಗಾಗಿ ತಮ್ಮ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಛೇರಿಯನ್ನು ಸಂಪರ್ಕಿಸಬಹುದು.  


ಹೆಚ್ಚಿನ ಮಾಹಿತಿಗಾಗಿ: ಶ್ರೀ ಸುಬ್ರಹ್ಮಣ್ಯ ಪ್ರಸಾದ್ (9448869340) ಸಂಯೋಜಕರು, ಶ್ರೀಮತಿ ಮಮತಾ ರಾವ್ (9449776921) ಕಾರ್ಯದರ್ಶಿ, ಮತ್ತು ಧರ್ನಪ್ಪ ಡಿ. (9449663417) ಕೋಶಾಧಿಕಾರಿ ಭಜನಾ ಕಮ್ಮಟ-2021 ಶ್ರೀ ಕ್ಷೇತ್ರ ಧರ್ಮಸ್ಥಳ ಇವರನ್ನು ಸಂಪರ್ಕಿಸಬಹುದಾಗಿದೆ.(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post