ಉಜಿರೆ: 2020ನೆ ಸಾಲಿನ ತಾಳ್ತಜೆ ಕೇಶವ ಭಟ್ಟ ಪ್ರಶಸ್ತಿಗೆ ಉಜಿರೆಯ ಡಾ. ಹಾ.ಮಾ.ನಾ. ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಹಾಗೂ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕ ಡಾ. ಎಸ್. ಡಿ. ಶೆಟ್ಟಿ ಆಯ್ಕೆಯಾಗಿದ್ದಾರೆ.
ಡಾ. ಶಾಂತಿನಾಥ ದೀಪಣ್ಣ ಶೆಟ್ಟಿ (ಎಸ್.ಡಿ. ಶೆಟ್ಟಿ) ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲಿಕೇರಿ ನಿವಾಸಿ. ಧಾರವಾಡದಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಪದವಿ ಹಾಗೂ ಮಂಗಳೂರು ವಿಶ್ವವಿದ್ಯಾಲಯದದಿಂದ ಪಿ.ಎಚ್‍ಡಿ. ಪಡೆದಿರುತ್ತಾರೆ.
ಎಸ್.ಡಿ.ಎಂ. ಕಾಲೇಜಿನಲ್ಲಿ 35 ವರ್ಷ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಳಿಕ ಡಾ. ಹಾ.ಮಾ.ನಾ. ಸಂಶೋಧನಾ ಕೇಂದ್ರದಲ್ಲಿ ಸಂಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ