ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

Upayuktha
0

 



ಪುತ್ತೂರು: ವಿವೇಕಾನಂದ ಪದವಿಪೂರ್ವಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.


ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 579 ನೇ ರ‍್ಯಾಂಕ್, ಇಂಜಿನಿಯರಿಂಗ್ ನಲ್ಲಿ 1153ನೇ ರ‍್ಯಾಂಕ್, ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 2094 ನೇ ರ‍್ಯಾಂಕ್ ಗಳಿಸಿದ ಅಮೃತಾ ಭಟ್, ಇಂಜಿನಿಯರಿಂಗ್ ವಿಭಾಗದಲ್ಲಿ 677ನೇ ರ‍್ಯಾಂಕ್ ಮತ್ತು ಎಗ್ರಿಕಲ್ಚರ್ ಬಿಎಸ್ಸಿಯಲ್ಲಿ 1385 ನೇ ರ‍್ಯಾಂಕ್ ಗಳಿಸಿದ ಗಣೇಶ ಕೃಷ್ಣ, ಇಂಜಿನಿಯರಿಂಗ್ ವಿಭಾಗದಲ್ಲಿ 784ನೇ ರ‍್ಯಾಂಕ್, ಫಾರ್ಮಾದಲ್ಲಿ 2664 ನೇ ರ‍್ಯಾಂಕ್ ಗಳಿಸಿದ ಚಿನ್ಮಯಿ ಇವರಿಗೆ ಶಾಲು ಹೊದಿಸಿ, ಪುಸ್ತಕ ಮತ್ತು ಸಿಹಿ ನೀಡಿ ವಿಶೇಷವಾಗಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ಉಪನ್ಯಾಸಕರು, ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top