||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಗಂಗಾವತಿ: 74ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಗಂಗಾವತಿ: 74ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

 ಕೊಪ್ಪಳ: ಕೃಷಿ ಮಹಾವಿದ್ಯಾಲಯ, ಗಂಗಾವತಿ, ಕೃಷಿ ಸಂಶೋಧನಾ ಕೇಂದ್ರ, ಗಂಗಾವತಿ ಹಾಗೂ ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿಯ ಸಹಯೋಗದಲ್ಲಿ ಶುಕ್ರವಾರ (ಸೆ.17) '74ನೇ -ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ'ಯನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಗತಿಪರ ರೈತರು, ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರು ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ನಿಯಮಿತದ ನಿರ್ದೇಶಕರೂ ಆಗಿರುವ ಜಿ. ಶ್ರೀಧರ ಕೇಸರಟ್ಟಿ ಅವರು ಆಗಮಿಸಿದ್ದರು.


ಇವರು ಮಾತನಾಡಿ ಕಲ್ಯಾಣ ಕರ್ನಾಟಕದ ವಿಮೋಚನಾ ದಿನ ಆಚರಿಸುವ ಮಹತ್ವ ಮತ್ತು ಅನುಭವಿಸಿದ ಶ್ರಮವನ್ನು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಶೈಕ್ಷಣಿಕವಾಗಿ ಹಿಂದುಳಿದಿದ್ದ ಈ ಭಾಗದಲ್ಲಿ ಕೃಷಿ ವಿಶ್ವವಿದ್ಯಾಲಯವು ಸ್ಥಾಪನೆಗೊಂಡು ಅದರಲ್ಲೂ ವಿಶೇಷವಾಗಿ ಕೊಪ್ಪಳ ಜಿಲ್ಲೆಗೆ ಕೃಷಿ ಮಹಾವಿದ್ಯಾಲಯವು ಬಂದಿರುವುದರಿಂದ ಈ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಕೃಷಿ ಪ್ರಧಾನ ರಾಷ್ಟ್ರವಾದ ನಮ್ಮ ದೇಶದ ಆರ್ಥಿಕ ಸಧೃಢತೆಯನ್ನು ಬಲಪಡಿಸಬೇಕೆಂದು ಕರೆ ನೀಡಿದರು.


ಕೃಷಿ ಮಹಾವಿದ್ಯಾಲಯ, ಗಂಗಾವತಿಯ ವಿಶೇಷ ಅಧಿಕಾರಿಗಳಾದ ಡಾ. ಬಿ.ಜಿ ಮಸ್ತಾನ ರೆಡ್ಡಿಯವರು ಧ್ವಜಾರೋಹಣ ನೇರವೆರೆಸಿ ಸರ್ವರಿಗೂ ದಿನಾಚರಣೆಯ ಶುಭಾಶಯ ಕೋರಿದರು ಹಾಗೂ ಹೆಚ್ಚಿನ ಆಸಕ್ತಿಯಿಂದ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳನ್ನು ಹಮ್ಮಿಕೊಂಡು ಕೃಷಿ ವಿಶ್ವವಿದ್ಯಾಲಯಕ್ಕೆ ರಾಷ್ಟ್ರಮಟ್ಟದಲ್ಲಿ ಪ್ರಸಿದ್ದಿಯನ್ನು ತರಲು ಸರ್ವರೂ ಶ್ರಮವಹಿಸಬೇಕೆಂದು ಕೋರಿದರು.


ಕಾರ್ಯಕ್ರಮದಲ್ಲಿ ಆವರಣದ ಎಲ್ಲಾ ವಿಜ್ಞಾನಿಗಳು, ಶಿಕ್ಷಕೇತರ ಸಿಬ್ಬಂದಿಯವರು ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.


(ಉಪಯುಕ್ತ ನ್ಯೂಸ್)ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post